ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನವದೆಹಲಿಯಲ್ಲಿ ಆರಂಭವಾಗುತ್ತಿದ್ದಂತೆ ಪರಸ್ಪರರ ನಡುವಣ ಮಾತಿನ ಚಕಮಕಿಯಿಂದಾಗಿ ಭಿನ್ನಮತ ಸ್ಫೋಟಗೊಂಡಿದೆ.ಕೇರಳದ ಜೆಡಿಎಸ್ ಧುರೀಣ ವಿರೇಂದ್ರ್ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳಿಂದಾಗಿ ಜೆಡಿಎಸ್ ಒಡೆದ ಮನೆಯಂತಾಗಿದೆ ಪಕ್ಷಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಬೇಕಾದ ಹಲವು ಕಾರ್ಯಕ್ರಮಗಳ ಚರ್ಚೆಗಾಗಿ ಕಾರ್ಯತಂತ್ರ ರೂಪಿಸಲು ನವದೆಹಲಿಯಲ್ಲಿ ಕರೆದಿದ್ದ ಸಭೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿತ್ತು. ಆದರೆ ಕೇರಳದ ಜೆಡಿಎಸ್ ನಾಯಕ ವಿರೇಂದ್ರ್ ಕುಮಾರ್ ಎಡಪಕ್ಷಗಳಿಗೆ ಬೆಂಬಲ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಜೆಡಿ (ಎಸ್) ಪಕ್ಷ ಒಡೆದುಹೋಳಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ನೀತಿಗಳ ಉಲ್ಲಂಘಿಸುವ ನಾಯಕರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ದೇವೇಗೌಡರು ಈಗಾಗಲೇ ಘೋಷಿಸಿದ್ದಾರೆ. ಅಲ್ಲದೇ, ಕೇರಳದಲ್ಲಿ ಎಡಪಕ್ಷಗಳಿಗೆ ಜೆಡಿಎಸ್ ಬೆಂಬಲ ನೀಡುವ ನಿಲುವಿಗೆ ಬದ್ಧರಾಗಿರುವ ಗೌಡರು, ವೀರೇಂದ್ರ ಅವರನ್ನು ಪಕ್ಷದಿಂದ ಹೊರಹಾಕುವ ಸಾಧ್ಯತೆಗಳಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡಲು ನಿರಾಕರಿಸಿದ ಪಕ್ಷಗಳಿಗೆ ಬೆಂಬಲ ನೀಡುವ ಕುರಿತಂತೆ ಕೇರಳದಲ್ಲಿ ನಡೆಯಲಿರುವ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಕೇರಳ ಜೆಡಿಎಸ್ ನಾಯಕ ವಿರೇಂದ್ರ್ ಕುಮಾರ್ ತಿಳಿಸಿದ್ದಾರೆ. |