ನಗರದಲ್ಲಿ ನಡೆದ ಕೋಮುಗಲಭೆ ಹಿನ್ನೆಲೆಯಲ್ಲಿ ನಡೆದಿರುವ ಹತ್ಯೆ ಕುರಿತು ನ್ಯಾಯಾಂಗ ತನಿಖೆ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 40ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಘಟನೆಯಲ್ಲಿ ಕೆಡಿಎಫ್ ಪಾತ್ರದ ಬಗ್ಗೆ ತಿಳಿದಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಷಯ ತಮ್ಮ ಗಮನಕ್ಕೆ ಬಂದಿದೆ. ಪ್ರಸ್ತುತ ಗಲಭೆ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಈ ಪ್ರಕರಣದ ಬಗ್ಗೆ ಜನತೆ ಬೆದರುವ ಅಗತ್ಯವಿಲ್ಲ ಎಂದು ತಿಳಿಸಿದ ಅವರು, ಸ್ಥಳೀಯ ಪೊಲೀಸರೊಂದಿಗೆ ಹೊರಗಿನಿಂದಲೂ ಪೊಲೀಸರನ್ನು ಕರೆಸಿ ಭದ್ರತೆ ಒದಗಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. |