ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀಡಿದ ಆದೇಶವನ್ನು ಅನುಷ್ಠಾನಗೊಳಿಸುವ ಸಂಬಂಧ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕನ್ನಡ ಭಾಷೆಯ ಅಭಿವೃದ್ದಿಗೆ, ಸಂರಕ್ಷಣೆಗೆ ಬದ್ಧವಾಗಿದೆ. ಈ ಬಗ್ಗೆ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದೆ. ನ್ಯಾಯಾಲಯದ ಆದೇಶವನ್ನು ಸರ್ಕಾರ ಗೌರವಿಸಲಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಹಿರಿಯ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಸೋಮವಾರಂದು ಚರ್ಚಿಸಿ ಕೋರ್ಟ್ ನಿರ್ದೇಶನವನ್ನು ಹೇಗೆ ಅನುಷ್ಠಾನಗೊಳಿಸಬೇಕು ಎಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದೇ ವೇಳೆ ಗುಲ್ಬರ್ಗಾದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಷಾ ಮಾಧ್ಯಮದ ಬಗ್ಗೆ ಹೈಕೋರ್ಟ್ ಆದೇಶವನ್ನು ಪಾಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಸಚಿವರು ಹಾಗೂ ತಜ್ಞರೊಂದಿಗೆ ಚರ್ಚಿಸಿ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
|