ಸಾಕಷ್ಟು ಪ್ರಯತ್ನ ನಡೆಸಿದ ಬಳಿಕ ಶಿವಮೊಗ್ಗ ಜಿಲ್ಲೆಗೆ ಎರಡು ರೈಲ್ವೆ ಯೋಜನೆಗಳನ್ನು ಮಂಜೂರು ಮಾಡಿಸಲಾಗಿದ್ದು, ಇನ್ನಷ್ಟು ಬೇಡಿಕೆ ಈಡೇರಿಕೆ ಸಂಬಂಧ ರೈಲ್ವೆ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಲಾಗುವುದು ಎಂದು ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಂಸದರಾಗಿ ಕೇವಲ ಎರಡು ತಿಂಗಳಲ್ಲಿ ಇಂತಹ ಸಾಧನೆ ಮಾಡಿರುವುದಕ್ಕೆ ಹೆಮ್ಮೆ ಎನಿಸಿದೆ. ಇದಕ್ಕೆ ರಾಜ್ಯ ಮತ್ತು ಕೇಂದ್ರ ರೈಲ್ವೆ ಸಚಿವರ ಸಹಕಾರವೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ಶಿವಮೊಗ್ಗ-ತಾಳಗುಪ್ಪ ರೈಲ್ವೆ ಮಾರ್ಗ ಪರಿವರ್ತನೆ ಪೂರ್ತಿ ಕಾರ್ಯಕ್ಕೆ ಬಜೆಟಿನಲ್ಲಿ ಕೇವಲ 36 ಕೋಟಿ ರೂ. ಮಂಜೂರಾಗಿದೆ. ಆದರೆ ಇದಕ್ಕೆ 141 ಕೋಟಿ ರೂ. ಬೇಕಾಗುತ್ತದೆ. ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಮತ್ತೊಮ್ಮೆ ಸಚಿವರಲ್ಲಿ ಚರ್ಚೆ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯದ ರೈಲ್ವೆ ಸಮಸ್ಯೆಗಳ ಬಗ್ಗೆ ರೈಲ್ವೆ ಇಲಾಖೆ ರಾಜ್ಯ ಸಚಿವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ ಎಂದು ಅವರು ಹೇಳಿದರು.
|