ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನುಮತಿ ನೀಡಲು ಹೈಕೋರ್ಟ್ ಬುಧವಾರವರೆಗೆ ನೀಡಿರುವ ಕಾಲಾವಕಾಶದಲ್ಲಿ ಭಾಷಾ ಮಾಧ್ಯಮ ನೀತಿಗೆ ಬದ್ಧವಾಗಿ ನಿರ್ಧಾರ ಕೈಗೊಳ್ಳಲು ಸರ್ಕಾರ ಅಂತಿಮ ಕಸರತ್ತು ನಡೆಸಿದೆ.ಈ ಸಂಬಂಧ ಶಿಕ್ಷಣ ಸಚಿವರು ಇಂದು ಶಿಕ್ಷಣ ಇಲಾಖೆ ಮತ್ತು ಕಾನೂನು ಇಲಾಖೆ ಅಧಿಕಾರಿಗಳು, ಕಾನೂನು ತಜ್ಞರ ಸಭೆ ಕರೆದಿದ್ದಾರೆ. ಸುಪ್ರಿಂಕೋರ್ಟ್‌ನಲ್ಲಿ ಬಾಕಿ ಇರುವ ಮೇಲ್ಮನವಿಯನ್ನು ಕೂಡಲೇ ವಿಚಾರಣೆಗೆ ತೆಗೆದುಕೊಳ್ಳುವಂತೆ ಕೋರಿಕೆ ಸಲ್ಲಿಸಲು ಈಗಾಗಲೇ ಸರ್ಕಾರ ನಿರ್ಧರಿಸಿದೆ.ಒಂದನೇ ತರಗತಿಯಿಂದ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕೆಂಬ ಸರ್ಕಾರದ ಭಾಷಾ ಮಾಧ್ಯಮ ನೀತಿಯನ್ನು ರದ್ದುಗೊಳಿಸಿದ ಹೈಕೋರ್ಟ್ ಪೂರ್ಣ ಪೀಠದ ತೀರ್ಪು ಪ್ರಶ್ನಿಸಿ , ಸುಪ್ರಿಂಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿಯನ್ನು ಕೂಡಲೇ ವಿಚಾರಣೆಗೆ ಕೈಗೆತ್ತಿಕೊಂಡು ಮಧ್ಯಂತರ ಆದೇಶ ನೀಡಬೇಕೆಂದು ಇಂದು ಸುಪ್ರಿಂಕೋರ್ಟ್ ಮುಂದೆ ಕೋರಿಕೆ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ. |