ಹಿಂಸೆಗೆ ಹಿಂಸೆಯೇ ಪರಿಹಾರವಲ್ಲ. ಪ್ರತಿಯೊಬ್ಬರು ತಾಳ್ಮೆಯಿಂದ ವರ್ತಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರೇಗೌಡ ಜನತೆಯಲ್ಲಿ ಮನವಿ ಮಾಡಿದ್ದಾರೆ.
ನಗರದಲ್ಲಿ ನಡೆದ ಕೋಮುಗಲಭೆಯಲ್ಲಿ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ ಸ್ವಾಂತನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಿಯೊಂದು ಸಮಸ್ಯೆಗೂ ಪರಿಹಾರವಿದೆ. ಆದರೆ ತಾಳ್ಮೆಯಿಂದ ವರ್ತಿಸಬೇಕು. ಯಾರೋ ಕಿಡಿಗೇಡಿಗಳು ಮಾಡಿದ ಕೃತ್ಯದಿಂದ ಇಂಥ ಘಟನೆ ಸಂಭವಿಸಿದೆ. ಸೇಡಿನಿಂದ ಎಲ್ಲವೂ ಬಗೆಹರಿಯಲಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮೈಸೂರು ಶಾಂತಿಗೆ ಹೆಸರಾದ ನಗರ. ಇಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಈ ಬಗ್ಗೆ ಸರ್ಕಾರ ತೀವ್ರ ನಿಗಾ ಇರಿಸಿದೆ. ಇದಕ್ಕೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಬಿಜೆಪಿ ಮುಖಂಡ ಗಿರಿಧರ್ ಮೇಲೆ ನಡೆಸಿರುವಂಥ ಹಲ್ಲೆಯನ್ನು ನಾನೆಂದೂ ಕಂಡಿಲ್ಲ. ಒಟ್ಟಾರೆ ಆತನ ಜೀವ ರಕ್ಷಣೆ ಮಾಡಬೇಕಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. |