"ರಾಜ್ಯದ ಕಾಂಗ್ರೆಸಿನಲ್ಲಿ ಭಿನ್ನಮತ ಇಲ್ಲ. ಕಾರ್ಯಕರ್ತರು ಅಥವಾ ಮುಖಂಡರು ದೆಹಲಿಯಲ್ಲಿ ಹಿರಿಯ ನಾಯಕರನ್ನು ಭೇಟಿಯಾಗುತ್ತಾರೆ ಎಂದರೆ ಅದು ಭಿನ್ನಮತ ಚಟುವಟಿಕೆ, ಪಕ್ಷದಲ್ಲಿ ಏನೋ ನಡೆಯುತ್ತಿದೆ ಎಂದರ್ಥವಲ್ಲ" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸೋಮವಾರ ತಿಳಿಸಿದ್ದಾರೆ.
ಪಕ್ಷವು ಪ್ರಜಾಸತ್ತಾತ್ಮಕವಾಗಿ ಕಾರ್ಯಾಚರಿಸುತ್ತಿದೆ. ಕಾರ್ಯಕರ್ತರು ಮತ್ತು ರಾಜ್ಯ ಮುಖಂಡರು ಹಿರಿಯ ನಾಯಕರನ್ನು ಭೇಟಿಯಾಗುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ ಅವರು, ಪಕ್ಷವು ಪ್ರಜಾಸತ್ತಾತ್ಮಕವಾಗಿ, ಪಾರದರ್ಶಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಪಕ್ಷದ ಉದ್ಧಾರಕ್ಕಾಗಿ ಯಾರು ಕೂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು ಎಂದು ನುಡಿದರು.
ಸದಸ್ಯತ್ವ ಅಭಿಯಾನ ಈಗಾಗಲೇ ಆರಂಭವಾಗಿದ್ದು, ನವೆಂಬರ್ 30ರಂದು ಪೂರ್ಣಗೊಳ್ಳಲಿದೆ. ಅದರ ನಂತರ ಬ್ಲಾಕ್ ಮಟ್ಟದಿಂದ ಹಿಡಿದು ಎಲ್ಲ ರೀತಿಯಲ್ಲಿಯೂ ಸಾಂಸ್ಥಿಕ ಚುನಾವಣೆಗಳು ನಡೆಯಲಿವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು. |