ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾದ ಕಸ್ತೂರಿ ರಂಗನ್ ಅವರು ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ಶೈಕ್ಷಣಿಕ ಸುಧಾರಣೆ ಕುರಿತು ಚರ್ಚಿಸಿದರು.
ಪರೀಕ್ಷಾ ವಿಧಾನದಲ್ಲಿ ಸುಧಾರಣೆಗಳನ್ನು ತರುವ ಬಗ್ಗೆ ಕಸ್ತೂರಿ ರಂಗನ್ ಸಲಹೆ ಮಾಡಿದ್ದು, ಅವರ ಸಲಹೆಯನ್ನು ಪರಿಶೀಲಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಚರ್ಚೆಯ ವೇಳೆಯಲ್ಲಿ ರಾಜ್ಯಸರ್ಕಾರದ ಬಗ್ಗೆ ಕಸ್ತೂರಿ ರಂಗನ್ ಬಹಳ ವಿಶ್ವಾಸ ವ್ಯಕ್ತಪಡಿಸಿದರು.
ಚರ್ಚೆಯಲ್ಲಿ ಉನ್ನತ ಶಿಕ್ಷಣಸಚಿವ ಅರವಿಂದ ಲಿಂಬಾವಳಿ ಕೂಡ ಪಾಲ್ಗೊಂಡಿದ್ದು, ಜ್ಞಾನ ಆಯೋಗದ ಎಲ್ಲ ಸಲಹೆಗಳನ್ನು ಜಾರಿ ಮಾಡುವುದಾಗಿ ಹೇಳಿದರು. |