ಕೋಮುಸೌಹಾರ್ದ ಕೆಡಿಸುತ್ತಿರುವ ಕೆಎಫ್‌ಡಿ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಗಲಭೆ ಹಿನ್ನೆಲೆಯಲ್ಲಿ ಗಾಯಗೊಂಡಿರುವವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಹಾಗೂ ಪಿಎಫ್ಐ ಸಂಘಟನೆಗಳು ಗಲಭೆಗೆ ಕುಮ್ಮಕ್ಕು ನೀಡಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ನಿಟ್ಟಿನಲ್ಲಿ ಈ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಶೀಘ್ರವೇ ಮಾತುಕತೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಲಾಗುವುದು ಎಂದು ಎಂದು ಅವರು ಹೇಳಿದರು.
ಇದೇ ವೇಳೆ ರಾಜ್ಯ ಸರ್ಕಾರ ಒಂದು ವರ್ಷವನ್ನು ಪೂರೈಸಿದ್ದು, ಹಲವು ಸಚಿವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವರ ಸಾಧನೆ ತೃಪ್ತಿಕರವಾಗಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕಾರಿಣಿಯಲ್ಲಿ ಅಂಥ ಸಚಿವರಿಗೆ ಸೂಚನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
|