ರಾಜ್ಯದಲ್ಲಿ ಪಿಯುಸಿ ಮಂಡಳಿಯನ್ನು ಬಲಪಡಿಸುವ ಚಿಂತನೆಗಳು ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಿಯು ಶಿಕ್ಷಣದ ಆಡಳಿತ ವ್ಯವಸ್ಥೆಯಲ್ಲಿ ಸಾಕಷ್ಟು ಕೊರತೆ ಕಂಡು ಬಂದಿದೆ. ಈ ನಿಟ್ಟಿನಲ್ಲಿ ಪಿಯುಸಿ ಮಂಡಳಿಯನ್ನು ಬಲಪಡಿಸುವ ಅಗತ್ಯತೆ ಇದೆ ಎಂದು ತಿಳಿಸಿದ್ದಾರೆ.
ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡುವವರು ಎಚ್ಚರಿಕೆ ವಹಿಸಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದ ಸಿಇಟಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನದಲ್ಲಿ 30 ಉತ್ತರ ಪತ್ರಿಕೆಗಳಲ್ಲಿ ಲೋಪದೋಷಗಳಾಗಿವೆ ಎಂದು ಸದನಕ್ಕೆ ಅವರು ತಿಳಿಸಿದ್ದಾರೆ.
ಈ ಬಾರಿ ನಡೆದಿರುವ ಪರೀಕ್ಷಾ ಕಾರ್ಯಗಳು ಪೂರ್ಣಗೊಂಡ ಬಳಿಕ ಮೌಲ್ಯ ಮಾಪಕರ ಭತ್ಯೆಗಳನ್ನು ಪರಿಷ್ಕರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. |