ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಇರುವುದು ನಿಜವೆಂದು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ತಕ್ಷಣವೇ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯೂರಿಯಾ ಹೊರತುಪಡಿಸಿ ಬೇರೆ ಯಾವ ಗೊಬ್ಬರದ ಕೊರತೆಯೂ ಕಂಡು ಬಂದಿಲ್ಲ. ರಾಜ್ಯ ಸರ್ಕಾರ ಮುಂದಾಲೋಚನೆಯಿಂದ ಸಾಕಷ್ಟು ಬಿತ್ತನೆ ಬೀಜ, ಗೊಬ್ಬರ ಸಂಗ್ರಹಿಸಿದೆ. ಈ ಬಗ್ಗೆ ಕೆಲವು ಹಿತಾಸಕ್ತಿಗಳು ತಪ್ಪು ಸುದ್ದಿ ಹಬ್ಬಿಸುತ್ತಿದ್ದಾರೆ. ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ರೈತರು ಸಮಾಧಾನದಿಂದ ವರ್ತಿಸಬೇಕು. ಪ್ರತಿಪಕ್ಷ ನಾಯಕರು ಟೀಕೆ ಮಾಡುವುದನ್ನು ಬಿಟ್ಟು ಸರ್ಕಾರದ ಜೊತೆ ಕೈ ಜೋಡಿಸಬೇಕು. ಕೇಂದ್ರದಲ್ಲಿರುವ ಅವರದೇ ಸರ್ಕಾರವನ್ನು ಒತ್ತಾಯಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳುವುದು ಕೇಂದ್ರದ ಹೊಣೆ. ಕೇಂದ್ರ ಕೃಷಿ ಸಚಿವರೇ ಗೊಬ್ಬರದ ಕೊರತೆ ಇದೆ ಎಂದು ಒಪ್ಪಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಸೂಕ್ತ ಗೊಬ್ಬರ ಪೂರೈಸಬೇಕೆಂದು ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.
ದಾವಣಗೆರೆ ವರದಿ: ಇದೇ ವೇಳೆ ಯೂರಿಯಾ ಗೊಬ್ಬರ ಕೊರತೆ ಬಗ್ಗೆ ಪ್ರಸ್ತಾಪಿಸಿದ ಕೃಷಿ ಸಚಿವ ಎಸ್.ವಿ. ರವೀಂದ್ರ ನಾಥ್, ರಾಜ್ಯಕ್ಕೆ ಒಟ್ಟು 21 ಲಕ್ಷ ಟನ್ ರಸಗೊಬ್ಬರದ ಅಗತ್ಯವಿದ್ದು, ಪ್ರಸ್ತುತ 9 ಲಕ್ಷ ಟನ್ ಮಾತ್ರ ಕೇಂದ್ರದಿಂದ ಪೂರೈಕೆಯಾಗಿದೆ ಎಂದು ತಿಳಿಸಿದ್ದಾರೆ.
|