ಬಿಬಿಎಂಪಿ ಚುನಾವಣೆ ವಿಳಂಬವಾಗುತ್ತಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ರಾಜ್ಯ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಒಂದಲ್ಲ ಒಂದು ನೆಪ ಹೇಳಿ ನಿರಂತರ ವಿಳಂಬ ನೀತಿಗೆ ಮಾರು ಹೋಗಿರುವ ಸರ್ಕಾರ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ವಿಭಾಗೀಯ ಪೀಠ ಮಂಗಳವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಜುಲೈ ತಿಂಗಳ ಅಂತ್ಯದೊಳಗೆ ಚುನಾವಣೆ ನಡೆಸಲು ಆದೇಶ ನೀಡಿದ್ದರೂ ಕೂಡ ಈಗ ವಾರ್ಡ್ ವಿಂಗಡಣೆ ನೆಪದಲ್ಲಿ ಮತ್ತೆ ಚುನಾವಣೆ ಮುಂದೂಡುವ ಹುನ್ನಾರ ನಡೆಸುತ್ತಿದೆ. ಇದೇ ರೀತಿ ಮುಂದುವರಿದರೆ ಸರ್ಕಾರದ ವಿರುದ್ಧ ಸ್ವಯಂ ಪ್ರೇರಿತ ಕ್ರಮಕ್ಕೆ ಮುಂದಾಗಬೇಕಾದೀತು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಾರ್ಡ್ ವಿಂಗಡಣೆ ಕುರಿತು ಕರಡು ಅಧಿಸೂಚನೆ ಹೊರಡಿಸಿದ್ದು, ಅಂತಿಮ ಅಧಿಸೂಚನೆ ಇನ್ನು ಪ್ರಕಟವಾಗಬೇಕಿದೆ. ಹೀಗಿರುವಾಗ ಹೈಕೋರ್ಟ್ ನೀಡಿದ್ದ ಜುಲೈ 31ರ ಅಂತಿಮ ಗಡುವಿನೊಳಗೆ ಚುನಾವಣೆ ನಡೆಸುವುದು ಅಸಾಧ್ಯವಾಗಿದೆ. |