ಉದ್ಯಾನನಗರಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಮಂಗಳವಾರ ಅಧಿವೇಶನದಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಬೆಂಗಳೂರು ನಗರದಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ರಸ್ತೆ ಕಾಮಗಾರಿ ನಿರ್ಮಿಸಲು ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ. ಅಲ್ಲದೆ, ಹಲವಾರು ಜಂಕ್ಷನ್‌ಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಕಾಮಗಾರಿ ಕೈಗೆತ್ತಿಕೊಳ್ಳಲು ಈಗಾಗಲೇ ಜೆಎಡಿ ತಯಾರಿಸಲಾಗಿದ್ದು, ಈ ಕುರಿತು ಸ್ಟೋಪ್ ಕನ್ಸಲ್ಟೆನ್ಸಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ಬಿಬಿಎಂಪಿ ಈ ಬಗ್ಗೆ ಅನುಮೋದನೆ ಪಡೆದು ಟೆಂಡರ್ ಆರಂಭಿಸಿದೆ ಎಂದು ಮಾಹಿತಿ ನೀಡಿದರು.
ಅಲ್ಲದೆ, ಪಾಲಿಕೆ ಮುಂದಿನ ಆಯವ್ಯಯದಲ್ಲಿ ಎರಡು ಅಂಡರ್ ಪಾಸ್ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು. |