ಕೊಳ್ಳೆಗಾಲ, ಚಿತ್ತಾಪುರ, ಗೋವಿಂದರಾಜ ನಗರ ಸೇರಿದಂತೆ ಸದ್ಯದಲ್ಲೇ ನಡೆಯಲಿರುವ ಉಪಚುನಾವಣೆ ಎದುರಿಸಲು ಆಡಳಿತಾರೂಢ ಬಿಜೆಪಿ ಸಜ್ಜುಗೊಂಡಿದೆ.
ಈ ನಿಟ್ಟಿನಲ್ಲಿ ರಾಜ್ಯದ ಐದು ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಿರುವ ಬಿಜೆಪಿ ಸರ್ಕಾರ ಈ ಎಲ್ಲ ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಬಿಜೆಪಿ ವರ್ಚಸ್ಸು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ತಲಾ ನಲವತ್ತು ಕೋಟಿ ರೂ. ನೀಡಲು ಯಡಿಯೂರಪ್ಪ ಸರ್ಕಾರ ಮುಂದಾಗಿದೆ.
ಈ ಮೂಲಕ ಕ್ಷೇತ್ರವನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ಬಯಸಿರುವ ಬಿಜೆಪಿ ನಾಯಕರು, ಬಂಪರ್ ಕೊಡುಗೆ ಮೂಲಕ ಜನತೆಯನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮನಗರ, ಧ್ರುವನಾರಾಯಣ್ ಅವರ ಕೊಳ್ಳೆಗಾಲ, ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ತಾಪುರ, ವಿ. ಸೋಮಣ್ಣ ಅವರ ಗೋವಿಂದರಾಜ ನಗರ ಸೇರಿದಂತೆ ಐದು ಕ್ಷೇತ್ರಗಳಿಗೆ ಸೆಪ್ಟೆಂಬರ್‌ನಲ್ಲಿ ಉಪ ಚುನಾವಣೆ ನಡೆಯಲಿದೆ. |