ವಸತಿ ಮತ್ತು ಮುಜರಾಯಿ ಸಚಿವ ವಿ. ಸೋಮಣ್ಣ ನಿಂದನೆ ಪ್ರಕರಣದಲ್ಲಿ ಪಾಲಿಕೆಯ ಸಹಾಯಕ ಅಭಿಯಂತರ ಸೋಮರಾಜ್ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.
ಈ ಪ್ರಕರಣದ ಕುರಿತು ಒಂದು ತಿಂಗಳ ಸಮಗ್ರ ವರದಿಯನ್ನು ನೀಡಬೇಕೆಂದು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಸ್. ನಾಯಕ್ ಸೂಚನೆ ನೀಡಿದ್ದಾರೆ.
ಪ್ರಕರಣದ ಬಗ್ಗೆ ಯಾರಾದರೂ ದೂರು ನೀಡಿದ್ದಾರೆಯೇ? ನೀಡಿದ್ದರೆ ಸರ್ಕಾರ ಯಾವ ಕ್ರಮ ಕೈಗೊಂಡಿದೆ. ಪೊಲೀಸರು ಕೈಗೊಂಡಿರುವ ತನಿಖೆಯ ಪ್ರಗತಿ ಮತ್ತಿತರ ಮಾಹಿತಿಯನ್ನೂ ಸಲ್ಲಿಸುವಂತೆ ತಿಳಿಸಿದ್ದಾರೆ.
ಇದೇ ವೇಳೆ ಆಸ್ಪತ್ರೆ ಸೇರಿ ಗುಣಮುಖರಾಗಿರುವ ಸಹಾಯಕ ಅಭಿಯಂತರ ಸೋಮರಾಜ್ ಅವರಿಗೂ ನೋಟಿಸ್ ಜಾರಿ ಮಾಡಿರುವ ಅಧ್ಯಕ್ಷರು ಪ್ರಕರಣದ ಸತ್ಯಾಸತ್ಯತೆ ಕುರಿತು ಹೇಳಿಕೆ ನೀಡುವಂತೆ ಸೂಚಿಸಿದ್ದಾರೆ. |