ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಂಗ್ಲಿಷ್ ಹಾಗೂ ಹಿಂದಿ ಜೊತೆಗೆ ಕನ್ನಡ ಭಾಷೆಗಳ ಪ್ರಕಟಣೆಗಳನ್ನು ಹೊರಡಿಸಲು ಆದೇಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿಂದು ಮಾತನಾಡಿದ ಅವರು, ವಿಮಾನ ನಿಲ್ದಾಣದಲ್ಲಿ ಜಾಹೀರಾತುದಾರರು ಕೂಡ ತ್ರಿಭಾಷಾ ಸೂತ್ರ ಅಳವಡಿಸುವಂತೆ ಸೂಚನೆ ನೀಡಲಾಗುವುದು. ಅಲ್ಲದೆ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಕಂಪೆನಿಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲು ಕಾರ್ಮಿಕ ಇಲಾಖೆ ಮೂಲಕ ತಿಳಿವಳಿಕೆ ನೀಡಲಾಗುವುದು ಎಂದು ಹೇಳಿದರು.
ಅಲ್ಲದೆ, ಕೇಂದ್ರ ಸರ್ಕಾರದ ಕಚೇರಿಗಳಲ್ಲೂ ಕನ್ನಡ ಭಾಷೆಗೆ ಗೌರವ ನೀಡಬೇಕು. ಕನ್ನಡ ಅನುಷ್ಠಾನದಲ್ಲಿ ನಿರಾಸಕ್ತಿ ತೋರುವ ಅಧಿಕಾರಿಗಳು ಕನ್ನಡ ಕಡ್ಡಾಯ ಬಳಸುವಂತೆ ಸುತ್ತೋಲೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಕನ್ನಡ ಶಾಸ್ತ್ರೀಯ ಸ್ಥಾನಮಾನದ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ಕನ್ನಡ ಶಾಸ್ತ್ರೀಯ ಸ್ಥಾನಮಾನದ ಸೌಲಭ್ಯಗಳನ್ನು ಪಡೆಯಲು ಶೀಘ್ರದಲ್ಲೇ ನಿಯೋಗವೊಂದನ್ನು ಕೇಂದ್ರದ ಬಳಿ ಕರೆದೊಯ್ಯಲಾಗುವುದು ಎಂದರು. |