ತೀವ್ರ ತೆರನಾದ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.ಉಸಿರಾಟದ ತೊಂದರೆಯಿಂದ ಬಳಲುತ್ತಿರವ 97 ವರ್ಷದ ಗಂಗೂಬಾಯಿ ಅವರನ್ನು ಮಂಗಳವಾರ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯ ತುಂಬಾ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಅವರನ್ನು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.ಗಂಗೂಬಾಯಿ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ನರಳುತ್ತಿದ್ದು, ಇದೀಗ ಚಿಕಿತ್ಸೆಗೆ ಅವರ ಆರೋಗ್ಯ ಸ್ಪಂದಿಸುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ.ಕಾಲಾಮದನಿ ತಿಳಿಸಿದ್ದಾರೆ.ಏತನ್ಮಧ್ಯೆ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಗಾಯಕಿ ಗಂಗೂಬಾಯಿ ಅವರು ಶೀಘ್ರ ಗುಣಮುಖರಾಗಲೆಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಶುಭ ಹಾರೈಸಿದ್ದಾರೆ. |