ಮೆಟ್ರೋ ರೈಲು ಕಾಮಗಾರಿ 2012ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ತಿನಲ್ಲಿ ಮಾತನಾಡಿದ ಅವರು, ಯಶವಂತಪುರದಿಂದ ಹೆಸರುಘಟ್ಟ ಕ್ರಾಸ್ ಮತ್ತು ಆರ್.ವಿ. ರಸ್ತೆ ಟರ್ಮಿನಲ್‌ನಿಂದ ಪುಟ್ಟೇನಹಳ್ಳಿವರೆಗೆ ನಿರ್ಮಿಸಲು ಉದ್ದೇಶಿಸಿರುವ ಮೆಟ್ರೋ ರೈಲು ಯೋಜನೆಯ ವಿಸ್ತರಣಾ ಜಾಲದ ಕಾಮಗಾರಿಗೆ ಈ ತಿಂಗಳಾಂತ್ಯದಲ್ಲಿ ಟೆಂಡರ್ ಕರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಟ್ರಿನಿಟಿ ವೃತ್ತದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೆಟ್ರೋ ನಿಲ್ದಾಣಕ್ಕೆಂದು ಪರಿಶಿಷ್ಟ ಜಾತಿ ವಿದ್ಯಾರ್ಥಿನಿಲಯದ ಕಟ್ಟಡವನ್ನು ನೆಲಸಮ ಮಾಡುತ್ತಿಲ್ಲ. ಬದಲಿಗೆ ಹಾಸ್ಟೆಲ್‌ನ ಮುಂಭಾಗದ ಜಾಗವನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಹೇಳಿದರು. ಇದೇ ವೇಳೆ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದರು. |