ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಮೇಲೆ ಬಳ್ಳಾರಿ ಕ್ಷೇತ್ರದ ಸಂಸದೆ ಜೆ.ಶಾಂತಾ ಅವರಿಗೆ ರಾಜ್ಯ ಹೈಕೋರ್ಟ್ ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಜೆ.ಶಾಂತಾ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ಮೂಲಕ ಅಕ್ರಮ ಎಸಗಿದ್ದಾರೆ ಎಂದು ಎಂ.ಚಂದ್ರೇಗೌಡ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು.ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಆನಂದ್ ಅವರ ನೇತೃತ್ವದ ಏಕಸದಸ್ಯ ಪೀಠ ಜೆ.ಶಾಂತಾ ಸೇರಿದಂತೆ 10ಮಂದಿ ಅಧಿಕಾರಿಗಳು ಆಗಸ್ಟ್ 10ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಆದೇಶ ನೀಡಿದೆ. |