ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಜತೆಗಿನ ಮೈತ್ರಿ ಕುರಿತಂತೆ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹಾಗೂ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.
ಮರು ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಇಂದು ನಡೆಯಬೇಕಿದ್ದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ಮುಂದೂಡಲಾಗಿದ್ದು, ಹೈಕಮಾಂಡ್ ಜೊತೆ ಮಾತುಕತೆ ನಡೆದ ಬಳಿಕ ಪಟ್ಟಿ ಸಿದ್ಧಪಡಿಸಲು ನಿರ್ಧರಿಸಲಾಗಿದೆ.
ಬಿಜೆಪಿ ಇದೇ ಶುಕ್ರವಾರದ ವೇಳೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಈಗಾಗಲೇ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯ ಸಾಧ್ಯತೆಯನ್ನು ಗಮನಿಸುತ್ತಿದೆ.
ಮುಖ್ಯವಾಗಿ ಮೈತ್ರಿ ಬಗ್ಗೆ ರಾಜ್ಯ ನಾಯಕರಲ್ಲಿ ಮೂಡಿರುವ ವಿಭಿನ್ನ ಅಭಿಪ್ರಾಯದಿಂದ ಯಾವುದೇ ನಿರ್ಧಾರ ಕೈಗೊಳ್ಳದಂತೆ ಆಗಿದೆ. ಈ ಗೊಂದಲ ನಿವಾರಣೆಗೆ ಹೈಕಮಾಂಡ್ ಮಾಗದರ್ಶನ ಪಡೆಯಲು ಕೆಪಿಸಿಸಿ ನಾಯಕರು ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಗುಲಾಂನಬಿ ಅಜಾದ್ ಸೇರಿದಂತೆ ಹಲವು ನಾಯಕರಲ್ಲಿ ಮಾತುಕತೆ ನಡೆಸಲಿದ್ದಾರೆ. |