ಏಕಕಾಲದಲ್ಲಿ ನಾಲ್ಕು ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಸಂಚಿನ ಹಿಂದೆ ರಾಜಕೀಯ ಪಿತೂರಿ ಅಡಗಿದೆ ಎಂದು ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಪ್ರತಿಕ್ರಿಯಿಸಿದ್ದಾರೆ.
ಕಾನೂನಿನಿಂದ ನನ್ನ ಕಟ್ಟಿ ಹಾಕುವ ಯತ್ನ ಇದು ಎಂದು ಬುಧವಾರ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ ತಾನು ಯಾವುದೇ ತೆರಿಗೆ ಬಾಕಿ ಉಳಿಸಿಕೊಂಡಿಲ್ಲ ಎಂದರು.
ಹಾಗೆಯೇ ನಾನು ತೆರಿಗೆ ಬಾಕಿ ಉಳಿಸಿಕೊಂಡಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಈ ಸಂದರ್ಭದಲ್ಲಿ ಸವಾಲು ಹಾಕಿದರು.
ಚನ್ನಪಟ್ಟಣದಲ್ಲಿನ ಐದನೇ ಕ್ರಾಸ್‌ನಲ್ಲಿರುವ ಬಿಜೆಪಿ ಪಕ್ಷದ ಕಚೇರಿ ಮತ್ತು ಯೋಗೀಶ್ವರ್ ನಿವಾಸ ಹಾಗೂ ಚಕ್ಕೆರೆಯಲ್ಲಿರುವ ನಿವಾಸ ಸೇರಿದಂತೆ ನಾಲ್ಕು ಕಡೆ ಏಕಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದರು. . ಸುಮಾರು 10ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿರುವ ಸುಮಾರು 25ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲದೇ ಬೆಂಗಳೂರಿನಲ್ಲಿರುವ ಅಪಾರ್ಟ್‌ಮೆಂಟ್, ಕಚೇರಿ ಮೇಲೂ ದಾಳಿ ನಡೆಸಿದ್ದರು. |