ಐದು ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ಜೆಡಿಎಸ್, ಅಂತಿಮ ಪಟ್ಟಿಯನ್ನು ಗುರುವಾರ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.
ಈ ಬಗ್ಗೆ ಸ್ಪಷ್ಟಪಡಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ನಾಳೆ ನಗರಕ್ಕೆ ದೆಹಲಿಯಿಂದ ನಾಯಕರು ಹಾಗೂ ಮುಖಂಡರು ಆಗಮಿಸಲಿದ್ದು, ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಪಟ್ಟಿ ಅಂತಿಮಗೊಳಿಸಲಾಗುವುದು. ಈಗಾಗಲೇ ಆಯಾ ಕ್ಷೇತ್ರಗಳ ಕಾರ್ಯಕರ್ತರ ಸಭೆ ನಡೆಸಲಾಗಿದ್ದು, ಟಿಕೆಟ್ ಆಕಾಂಕ್ಷಿಗಳ ವಿವರಣೆ ಪಡೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿರುವುದರಿಂದ ಶೀಘ್ರವೇ ಪಟ್ಟಿ ಅಂತಿಮಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ ಅವರು, ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರ ಇನ್ನು ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. |