ಭಾಷಾ ಮಾಧ್ಯಮ ನೀತಿ ವಿವಾದ ಕುರಿತ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಆಗಸ್ಟ್ ಕೊನೆಯ ವಾರದವರೆಗೆ ಮುಂದೂಡುವ ಮೂಲಕ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಾಂಗ ನಿಂದನೆಯ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ನ್ಯಾಯಪೀಠ, ನ್ಯಾಯಾಂಗ ನಿಂದನೆಗೆ ನೀಡಿದ ತಡೆಯಾಜ್ಞೆಯನ್ನು ಆಗಸ್ಟ್ ಅಂತಿಮದವರೆಗೂ ಮುಂದೂಡಿರುವುದಾಗಿ ಹೇಳಿದೆ.
ಭಾಷಾ ಮಾಧ್ಯಮ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆಗೆ ಸುಪ್ರೀಂಕೋರ್ಟ್ ಇತ್ತೀಚೆಗೆ ತಡೆಯಾಜ್ಞೆ ನೀಡುವ ಮೂಲಕ ರಾಜ್ಯ ಸರ್ಕಾರ ತಾತ್ಕಾಲಿಕ ನಿರಾಳತೆ ಕಂಡಿತ್ತು.
ನ್ಯಾಯಾಂಗ ನಿಂದನೆ ವಿಚಾರಣೆ ಹೈಕೋರ್ಟ್‌ನಲ್ಲಿ ಜು.16ರಿಂದ ಆರಂಭವಾಗಬೇಕಿತ್ತು. ಆದರೆ ಇದೀಗ ಹೈಕೋರ್ಟ್ ವಿಚಾರಣೆಗೆ ಸುಪ್ರೀಂಕೋರ್ಟ್ ಜು.24ರವರೆಗೆ ಮುಂದೂಡಿ ತಡೆಯಾಜ್ಞೆ ನೀಡಿತ್ತು.
ಭಾಷಾ ಮಾಧ್ಯಮ ವಿವಾದ ಕುರಿತಂತೆ ರಾಜ್ಯ ಸರ್ಕಾರ ನ್ಯಾಯಾಂಗ ನಿಂದನೆಗೆ ಗುರಿಯಾಗಿ ಹೈಕೋರ್ಟ್‌ನಲ್ಲಿ ತೀವ್ರ ಮುಖಭಂಗ ಅನುಭವಿಸಿತ್ತು. ಅದರಿಂದ ಪಾರಾಗಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಭಾಷಾ ಮಾಧ್ಯಮ ನೀತಿ ಕುರಿತಂತೆ ಹೈಕೋರ್ಟ್ ಪೂರ್ಣಪೀಠ ನೀಡಿದ ತೀರ್ಪನ್ನು ಅನುಷ್ಠಾನಗೊಳಿಸಲು ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರಕ್ಕೆ ಸೋಮವಾರದವರೆಗೆ ಕಾಲಾವಕಾಶ ನೀಡಿತ್ತು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಆರೋಪ ನಿಗದಪಡಿಸುವುದಾಗಿ ಹೇಳಿತ್ತು. |