ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ನೋಡಿ ಸಾಕಾಗಿದೆ. 10 ವರ್ಷವದರೂ ಸರಿ ಏಕಾಂಗಿಯಾಗಿ ಸ್ಪರ್ಧಿಸಿ ಅಧಿಕಾರ ಪಡೆದುಕೊಳ್ಳಲಾಗುವುದು. ಮೈತ್ರಿ ಮಾಡಿಕೊಂಡು ಅವರ ಮನೆ ಬಾಗಿಲಿಗೆ ಹೋಗಿ ಸ್ವಾಭಿಮಾನ ಕಳೆದುಕೊಳ್ಳಲು ನಾವು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸೋಮವಾರದಂದು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.
ಇತ್ತೀಚೆಗೆ ದೆಹಲಿಗೆ ತೆರಳಿದ್ದ ಕೆಪಿಸಿಸಿ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಬೇಡವೆಂಬ ಸಂದೇಶವನ್ನು ಹೈಕಮಾಂಡ್‌ಗೆ ತಿಳಿಸಿರುವ ವಿಚಾರ ಜೆಡಿಎಸ್ ನಾಯಕರನ್ನು ಕೆರಳಿಸಿದೆ. ಈ ಕಾರಣದಿಂದಲೇ ಕಾಂಗ್ರೆಸ್ ಸಹವಾಸ ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಜೆಡಿಎಸ್ ಏಕಾಂಗಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದೆ. |