ಪದವಿಪೂರ್ವ ಶಿಕ್ಷಣ ಇಲಾಖೆ ಜೂನ್-ಜುಲೈ ತಿಂಗಳಲ್ಲಿ ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ (ಸಪ್ಲಿಮೆಂಟರಿ) ಪರೀಕ್ಷೆ ಫಲಿತಾಂಶ ಶನಿವಾರ 6ಗಂಟೆಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ ಎಂದು ಇಲಾಖೆ ನಿರ್ದೇಶಕ ಎಸ್.ಶಂಕರನಾರಾಯಣ ತಿಳಿಸಿದ್ದಾರೆ.
ಬೆಂಗಳೂರು ಒನ್ ಕೇಂದ್ರಗಳಲ್ಲೂ ಫಲಿತಾಂಶ ಲಭ್ಯವಿರುತ್ತದೆ. ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಫಲಿತಾಂಶ ಪಟ್ಟಿಯನ್ನು ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಜುಲೈ 26ರ ಬೆಳಿಗ್ಗೆ 10ಗಂಟೆ ನಂತರ ಪಡೆದು ಕಾಲೇಜುಗಳಲ್ಲಿ ಪ್ರಕಟಿಸಲು ನಿರ್ದೇಶಕರು ಆದೇಶಿಸಿದ್ದಾರೆ.
ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಸಂಜೆ 6ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |