ಕರ್ನಾಟಕ ಹಾಲು ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಸಕ ಸೋಮಶೇಖರ ರೆಡ್ಡಿ ಅಧ್ಯಕ್ಷರಾಗಿ ಮೂರು ತಿಂಗಳು ಮಾತ್ರ ಕಾರ್ಯನಿರ್ವಹಿಸಲಿದ್ದು, ಮೂರು ತಿಂಗಳ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಗೌಡ ಕೆ.ಎಂ.ಎಫ್ ಅಧ್ಯಕ್ಷರಾಗಲಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಸದಾನಂದ ಗೌಡರವರ ಅಧ್ಯಕ್ಷ ಅವಧಿ ನವೆಂಬರ್‌ಗೆ ಅಂತ್ಯವಾಗಲಿದ್ದು, ಮೂರನೇ ಬಾರಿ ಅಧ್ಯಕ್ಷರಾಗಲು ಬಿಜೆಪಿ ಪಕ್ಷದ ಸಂವಿಧಾನದಲ್ಲಿ ಅವಕಾಶವಿಲ್ಲ. ಹಾಗಾಗಿ ನವೆಂಬರ್‌ನಲ್ಲಿ ಪಕ್ಷದ ಅಧ್ಯಕ್ಷ ಗಾದಿಯಿಂದ ಕೆಳಗಿಳಿಯಲಿರುವ ಸದಾನಂದ ಗೌಡರು ಕೆಎಂಎಫ್ ಅಧ್ಯಕ್ಷ ಪಟ್ಟ ಏರಲಿದ್ದಾರೆ. ಇದಕ್ಕೆ ರೆಡ್ಡಿ ಸಹೋದರರು ಸಮ್ಮತಿ ನೀಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ಹೇಳಿವೆ.
ಈಗಾಗಲೇ ಸರ್ಕಾರದಲ್ಲಿ ಸಚಿವರಾಗಿರುವ ಗಣಿ ರೆಡ್ಡಿ ಸಹೋದರರ ಜೊತೆ ಸೋಮಶೇಖರ ರೆಡ್ಡಿಯವರನ್ನು ಅಧ್ಯಕ್ಷರನ್ನಾಗಿಸಲಾಗಿದೆ. ಇದೊಂದು ತಾತ್ಕಾಲಿಕ ವ್ಯವಸ್ಥೆಯಷ್ಟೇ ಮುಂದೆ ಅಧ್ಯಕ್ಷರಾಗಿ ಸದಾನಂದ ಗೌಡ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |