ಸಾರ್ವಜನಿಕರು ಎಚ್ಚೆತ್ತುಕೊಂಡು ರಾಜಕೀಯಕ್ಕೆ ಮೇಜರ್ ಸರ್ಜರಿ ಮಾಡದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆ ಗಂಡಾಂತರಕ್ಕೆ ಸಿಲುಕಲಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆತಂಕ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಸೇವೆ ಮಾಡುತ್ತೇವೆಂದು ಅಧಿಕಾರಕ್ಕೆ ಬರುವ ರಾಜಕಾರಣಿಗಳು ಜನರಿಂದಲೇ ದೂರವಾಗುತ್ತಿದ್ದಾರೆ. ಇದರಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಸಂಪೂರ್ಣ ಬದಲಾಗುತ್ತಿದೆ ಎಂದು ಬೇಸರಿಸಿದರು.
ಈ ನಿಟ್ಟಿನಲ್ಲಿ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ. ರಾಜಕೀಯವನ್ನು ಸರಿದಾರಿಗೆ ತರದಿದ್ದರೆ ರಾಜಕೀಯ ಪಕ್ಷಗಳು ಜನರಿಂದ ಮತ್ತಷ್ಟು ದೂರವಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾ ಸೇವಕರನ್ನು ಆಯ್ಕೆ ಮಾಡಬೇಕೇ ಹೊರತು, ಜನನಾಯಕರನ್ನಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಸರ್ಕಾರಿ ನೌಕರರೇ, ಯಾರೂ ಇಲ್ಲಿ ಅಧಿಕಾರಿಗಳಲ್ಲ ಎಂದು ಅವರು ಅಭಿಪ್ರಾಯಪಟ್ಟರು.
|