ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮಿನಿ ಮಹಾಸಮರ; ಕಾಂಗ್ರೆಸ್ ಪಟ್ಟಿ ಬಿಡುಗಡೆ (Congress | Kpcc | R.V. Deshpande | Sonia gandhi)
 
ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳಿಗೆ ಆಗೋಸ್ಟ್ 18ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದೆ.

ಕೆಪಿಸಿಸಿ ರಾಜ್ಯಾಧ್ಯಕ್ಷ ಆರ್.ವಿ.ದೇಶಪಾಂಡೆ ಪಕ್ಷದ ಕಚೇರಿಯಲ್ಲಿ ಮಿನಿ ಮಹಾಸಮರದ ಅಖಾಡಕ್ಕಿಳಿಯಲಿರುವ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಚಿತ್ತಾಪುರ್ - ಪ್ರಿಯಾಂಕ ಖರ್ಗೆ, ಚನ್ನಪಟ್ಟಣ - ಟಿ.ಕೆ.ಯೋಗೀಶ್ , ರಾಮನಗರ - ಸಿ.ಎಂ.ಲಿಂಗಪ್ಪ, ಗೋವಿಂದರಾಜನಗರ - ಪ್ರಿಯಕೃಷ್ಣ, ಕೊಳ್ಳೆಗಾಲ - ಎಸ್.ಜಯಣ್ಣ.

ಉಪ ಚುನಾವಣೆಯಲ್ಲಿ ಐದೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸ ಹೊಂದಿರುವುದಾಗಿ ತಿಳಿಸಿದ ದೇಶಪಾಂಡೆ, ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಹಿರಿಯ ನಾಯಕರು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ