ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸರ್ಕಾರಿ ಭೂಮಿ ರಕ್ಷಣೆಗೆ ಕಾರ್ಯಪಡೆ: ಬಿ.ಎಸ್.ಯಡಿಯೂರಪ್ಪ (BJP | Yeddyurappa | Congress | JDS)
 
ಸರ್ಕಾರಿ ಭೂಮಿ ಅನ್ಯರ ಪಾಲಾಗದಂತೆ ಸಂರಕ್ಷಿಸಲು ನಿವೃತ್ತ ಐಎಎಸ್ ಅಧಿಕಾರಿ ಎಂ.ಬಾಲಸುಬ್ರಮಣಿಯನ್ ನೇತೃತ್ವದಲ್ಲಿ ಸರ್ಕಾರಿ ಜಮೀನು ಸಂರಕ್ಷಣಾ ಕಾರ್ಯಪಡೆಯನ್ನು ಸರ್ಕಾರ ರಚಿಸಿದೆ.

ಬೆಂಗಳೂರು ನಗರ ಸುತ್ತಮುತ್ತಲ ಸರ್ಕಾರಿ ಜಮೀನು ಒತ್ತುವರಿಯ ಸಂಬಂಧ ತನಿಖೆ ನಡೆಸಲು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಜಂಟಿ ಸದನ ಸಮಿತಿಯ ವರದಿ ಆಧರಿಸಿ ಭವಿಷ್ಯದಲ್ಲಿ ಮತ್ತೆ ಎಂದೆಂದೂ ಭೂಮಿಯನ್ನು ಕಬಳಿಸದಂತೆ ಎಚ್ಚರ ವಹಿಸಲು ಈ ಕಾರ್ಯಪಡೆ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡುತ್ತ ತಿಳಿಸಿದರು.

ಈ ವಿಶೇಷ ಕಾರ್ಯಪಡೆಯಲ್ಲಿ ಹತ್ತು ಮಂದಿ ಸರ್ಕಾರದ ಹಿರಿಯ ಅಧಿಕಾರಿಗಳೇ ಸದಸ್ಯರಾಗಿರುವುದು ವಿಶೇಷವಾಗಿದೆ. ಪ್ರಾದೇಶಿಕ ಆಯುಕ್ತರು ಸದಸ್ಯರಾಗಿದ್ದು, ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ ಎಂದವರು ಹೇಳಿದರು.

2006ರಲ್ಲಿ ಅಂದಿನ ಶಾಸಕ ಎ.ಟಿ.ರಾಮಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸದನ ಸಮಿತಿ 33878 ಎಕರೆ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಗುರುತಿಸಿದೆ ಎಂದರು. ಈ ಪೈಕಿ 9033 ಎಕರೆ ಒತ್ತುವರಿ ಭೂಮಿಯನ್ನು ತೆರೆವುಗೊಳಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಜಮೀನನ್ನು ರಕ್ಷಿಸಲು ಕಾನೂನಿನ ಚೌಕಟ್ಟಿನಲ್ಲಿ ಜಮೀನು ಸಂರಕ್ಷಣೆ ಕಾರ್ಯಪಡೆ ರಚಿಸಲಾಗಿದೆ ಎಂಬ ಮುಖ್ಯಮಂತ್ರಿ ಹೇಳಿಕೆ ಕಲಾಪದಲ್ಲಿ ಕೆಲ ಹೊತ್ತು ಕಾವೇರಿದ ಚರ್ಚೆಗೆ ಕಾರಣವಾಯಿತು. ರಾಮಸ್ವಾಮಿ ಸಲ್ಲಿಸಿರುವ ಪೂರ್ಣ ವರದಿಯನ್ನು ಸದನದಲ್ಲಿ ಮಂಡಿಸಬೇಕೆಂದು ಆಗ್ರಹಿಸಿದ ಪ್ರತಿಪಕ್ಷಗಳ ಸದಸ್ಯರು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಹಾಗೂ ಒತ್ತುವರಿಗೆ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಅವರು ಆಗ್ರಹಿಸಿದರು.

ಸರ್ಕಾರಿ ಜಮೀನು ಒತ್ತುವರಿಯಲ್ಲಿ ಪತ್ತೆಯಾಗಿರುವ ಭೂಮಿಯಲ್ಲಿ ತಂತಿಬೇಲಿ ಹಾಕಿ ಸಂರಕ್ಷಿಸಲಾಗುವುದು ಎಂದು ಹೇಳಿದ ಯಡಿಯೂರಪ್ಪ ಅವರು, ಕೆಲವರು ನ್ಯಾಯಾಲಯದಲ್ಲಿ ತಂದಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ