ರಾಜ್ಯದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಮುಂದಿನ ಆಗೋಸ್ಟ್‌ನಲ್ಲಿ ಕಾಯಂ ಪಡಿತರ ಚೀಟಿಯನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹರತಾಳು ಹಾಲಪ್ಪ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಾಯಂ ಪಡಿತರ ಚೀಟಿ ವಿತರಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಆಗಸ್ಟ್‌ನಲ್ಲಿ ವಿತರಿಸಲಾಗುವುದು ಎಂದು ವಿಮಲಾಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ 1,6,68, 594 ಮಂದಿಗೆ ಪಡಿತರ ಚೀಟಿ ವಿತರಿಸಲಾಗಿದ್ದು, ಅನರ್ಹರು ಪಡೆದಿರುವ ಪಡಿತರ ಚೀಟಿಯನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಪಡಿತರ ಆಹಾರ ಪದಾರ್ಥಗಳ ವಿತರಣೆಯಲ್ಲಿ ನಡೆಯುವ ಅಕ್ರಮವನ್ನು ಪಡೆಯಲು 'ಪಾಯಿಂಟ್ ಆಫ್ ಸ್ಕೇಲ್' ಯೋಜನೆಯನ್ನು ರೂಪಿಸಲಾಗಿದ್ದು, ಎಲ್ಲಾ ಪಡಿತರ ಕಾರ್ಡುದಾರರಿಗೂ ಸ್ಮಾರ್ಟ್ ಕಾರ್ಡ್ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.
ಕೆಲವು ಶ್ರೀಮಂತರು ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿದ್ದಾರೆ ಎಂದು ಹೇಳಲಾಗದು, ಆದರೆ ಲಕ್ಷಾಂತರ ಮಂದಿ ಅನರ್ಹರು ಪಡಿತರ ಚೀಟಿ ಹೊಂದಿದ್ದಾರೆ ಎಂದು ತಿಳಿಸಿದರು.