ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕ್ಯಾತಮಾರನಹಳ್ಳಿ ಗಲಭೆ; ಮುತಾಲಿಕ್‌ಗೆ ಜಾಮೀನು (Mysore | Pramod Mutalik | Sri Rama Sene | Dakshina Kannada)
 
NRB
ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಪಟ್ಟಿದ್ದ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಅವರಿಗೆ ಮಂಗಳವಾರ ಇಲ್ಲಿನ 2ನೇ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿದೆ.

ಇಂದು ಸಂಜೆ ಮುತಾಲಿಕ್ ಬಂಧನ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು, ಬಳ್ಳಾರಿ ಜೈಲಿನಲ್ಲಿರುವ ಮುತಾಲಿಕ್ ಅವರು ಬುಧವಾರ ಬಿಡುಗಡೆಯಾಗಲಿದ್ದಾರೆ.

ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸರು ಶುಕ್ರವಾರ(24) ರಾತ್ರಿ ಬೆಳಗಾವಿಯಲ್ಲಿ ಮುತಾಲಿಕ್ ಅವರನ್ನು ಬಂಧಿಸಿದ್ದು, ಮೈಸೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ಜು.28ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ಮಧ್ಯೆ, ಹಿಂದೂವಾದಿಗಳನ್ನು ಜೈಲಿಗೆ ತಳ್ಳುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಮುತಾಲಿಕ್ ಜೈಲಿನಲ್ಲಿ ಆಮರಣಾಂತ ಉಪವಾಸ ಕೈಗೊಂಡಿದ್ದರು.

ಪ್ರಮೋದ್ ಮುತಾಲಿಕ್ ಅವರು ಮಾಡಿದ್ದ ಪ್ರಚೋದನಕಾರಿ ಭಾಷಣವೇ ಗಲಭೆಗೆ ಕಾರಣ ಎಂದು ಆರೋಪಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಬೆಳಗಾವಿಯಲ್ಲಿ ಅವರನ್ನು ಬಂಧಿಸಿದ್ದರು.

ಇತ್ತೀಚೆಗೆ ಮೈಸೂರಿನ ಉದಯಗಿರಿ ಎಂಬಲ್ಲಿ ಮಸೀದಿ ಕಟ್ಟುವ ನಿವೇಶನಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ನಡೆದ ಜಗಳ ಹಿಂಸಾಚಾರಕ್ಕೆ ತಿರುಗಿ, ಘಟನೆಯಲ್ಲಿ ಇರಿತದಿಂದ ಇಬ್ಬರು, ಪೊಲೀಸ್ ಗೋಲಿಬಾರ್‌‌ಗೆ ಒಬ್ಬ ಬಲಿಯಾಗುವ ಮೂಲಕ ತೀವ್ರ ಹಿಂಸಾಚಾರ ನಡೆದಿತ್ತು.

ಈ ಘಟನೆಗೂ 3 ತಿಂಗಳ ಮುನ್ನ ಕ್ಯಾತಮಾರನಹಳ್ಳಿಯಲ್ಲಿನ ದೇವಾಲಯಗಳ ಮೂರ್ತಿಗಳನ್ನು ಹಾಳುಗೆಡವಲಾಗಿತ್ತು. ಈ ಸಂದರ್ಭದಲ್ಲಿ ಒಂದು ವಾರಗಳ ಕಾಲ ನಿಷೇಧಾಜ್ಞೆ ಹೇರಲಾಗಿತ್ತು. ಘಟನೆಯ ನಂತರ ಮುತಾಲಿಕ್ ಅವರು ಕ್ಯಾತಮಾರನಹಳ್ಳಿಗೆ ಭೇಟಿ ನೀಡಿದ್ದರು. ಅಲ್ಲದೇ ಘಟನೆ ಕುರಿತಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಮತ್ತು ಸರ್ಕಾರ ವಿಫಲವಾಗಿರುವುದಾಗಿ ಆರೋಪಿಸಿ, ಇದಕ್ಕೆ ನಾವು ಕೂಡ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಚೋದನಾಕಾರಿ ಮಾತನ್ನು ಆಡಿದ್ದರು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ