ರಾಜ್ಯದಲ್ಲಿ ನಡೆಯಲಿರುವ ಮಿನಿ ಸಮರಕ್ಕೆ ಅಖಾಡ ಸಿದ್ದವಾಗಿದ್ದು, ಕೊನೆಗೂ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಮನಗರ ರಹಸ್ಯವನ್ನು ಬಹಿರಂಗಪಡಿಸಿವೆ.
ಪ್ರತಿಷ್ಠೆಯ ಕಣವಾಗಿರುವ ರಾಮನಗರ ಕ್ಷೇತ್ರಕ್ಕೆ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಇದರಂತೆ ಜೆಡಿಎಸ್ ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಕೆ. ರಾಜು ಅವರನ್ನು ಆಯ್ಕೆ ಮಾಡಿದೆ. ಅವರ ವಿರುದ್ಧ ಬಿಜೆಪಿಯಿಂದ ನಾರಾಯಣ ಗೌಡ ಸ್ಪರ್ಧಿಸಲಿದ್ದಾರೆ.
ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿದ್ದು, ಅಂತಿಮ ಹಂತದಲ್ಲಿ ಉಭಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆಗೆ ಇಡೀ ದಿನ ಸರ್ಕಸ್ ನಡೆಸಿತ್ತು.
ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದಾಗಲೂ ಬಿಡುವು ಮಾಡಿಕೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ರಾಮನಗರಕ್ಕೆ ಸ್ಪರ್ಧಿಸುವ ಅಕಾಂಕ್ಷಿಗಳಾಗಿದ್ದ ಬಿ.ಡಿ.ಸಿ.ಸಿ.ಅಧ್ಯಕ್ಷ ನಾರಾಯಣಗೌಡ ಮತ್ತು ವಿ.ನಾಗರಾಜ್ ಜತೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. ನಂತರ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿ ನಾರಾಯಣ ಗೌಡ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಅದೇ ರೀತಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಹಾಗೂ ಚಲುವರಾಯಸ್ವಾಮಿ ಅವರು ಸಭೆ ಸೇರಿ ಚರ್ಚಿಸಿದರು. ಅಲ್ಲದೇ ರಾಮನಗರ ಕ್ಷೇತ್ರದ ಆಕಾಂಕ್ಷಿಗಳಾಗಿದ್ದ ಮರಿಲಿಂಗೇಗೌಡ, ರಾಜು ಮತ್ತು ಅಫ್ತರ್ ಆಘಾ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು. ನಂತರ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯದಂತೆ ರಾಜು ಅವರಿಗೆ ಟಿಕೆಟ್ ನೀಡುವ ನಿರ್ಧಾರಕ್ಕೆ ಬಂದರು.
ಇದರಂತೆ ಕಣಕ್ಕಿಳಿಯುವ ಪ್ರಮುಖ ರಾಜಕೀಯ ಪಕ್ಷಗಳ ವಿವರ ಇಂತಿದೆ.