ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಐದು ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಂಸದ ಅನಂತ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಾಧನೆಗಳು ಐದು ಕ್ಷೇತ್ರದ ಗೆಲುವಿಗೆ ಕಾರಣವಾಗಲಿದೆ ಎಂದು ಹೇಳಿದ್ದಾರೆ.
ಗೋವಿಂದರಾಜನಗರದ ಅಭ್ಯರ್ಥಿ ವಿ. ಸೋಮಣ್ಣ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡ ಅವರು, ಸೋಮಣ್ಣ ಅವರ ಗೆಲುವು ಖಚಿತ. ಕಳೆದ ಚುನಾವಣೆಯಲ್ಲಿ 28 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಸೋಮಣ್ಣ ಈ ಬಾರಿ ಅದಕ್ಕಿಂತ ಎರಡು ಪಟ್ಟು ಮತಗಳಿಂದ ಜಯಭೇರಿ ಭಾರಿಸಲಿದ್ದಾರೆ ಎಂದು ಹೇಳಿದರು.
ಈ ಕ್ಷೇತ್ರದಲ್ಲಿ ಜನಬಲ ಮತ್ತು ಹಣಬಲದ ನಡುವೆ ಹೋರಾಟ ನಡೆಯಲಿದ್ದು, ಸೋಮಣ್ಣ ಅವರ ಜನಬಲ ಮತ್ತು ಸೇವಾಬಲ ಜಯಸಾಧಿಸಲಿದೆ ಎಂದು ಅವರು ಭವಿಷ್ಯ ನುಡಿದರು.