ಕಳೆದ 2008ರ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರು ಹಾಜರಾದ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಗೋಪಾಲಕೃಷ್ಣ ಬೇಳೂರು ವಿರುದ್ಧ ಸಾಗರ ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದೆ.
ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಹಲವು ಬಾರಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಇಂದು ಸಹ ಶಾಸಕ ಗೋಪಾಲಕೃಷ್ಣ ಬೇಳೂರು ಗೈರು ಹಾಜರಾಗಿದ್ದರು. ಇಂದು ಸಹ ಶಾಸಕ ಗೋಪಾಲಕೃಷ್ಣ ಬೇಳೂರು ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದೆ.
ಬೇಳೂರು ಗೋಪಾಲಕೃಷ್ಣ ಅವರು ಚುನಾವಣಾ ನೀತಿ ಸಂಹಿತೆ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಸಾಗರದಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಿದ್ದರು ಎಂಬ ಆರೋಪ ಎದುರಿಸುತ್ತಿದ್ದರು. ಈ ಸಂಬಂಧ ಸಾಗರ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.