ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸದ್ಯಕ್ಕೆ ತಿರುವಳ್ಳುವರ್ ಪ್ರತಿಮೆ ಅನಾವರಣ ಇಲ್ಲ (Thiruvalluvar | sarvajna | Karnataka | Tamilnadu | Yeddyurappa)
 
ಚೆನ್ನೈಯಲ್ಲಿ ಸರ್ವಜ್ಞನ ಪ್ರತಿಮೆ ಹಾಗೂ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಕೆಲಕಾಲ ಮುಂದೂಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಎದುರಾಗಿರುವುದರಿಂದ, ಕನ್ನಡಪರ ಸಂಘಟನೆಗಲ ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎನ್ನಲಾಗಿದೆ.

ನಿಗದಿಯಂತೆ ಪ್ರತಿಮೆಯನ್ನು ಆಗಸ್ಟ್ 9ರಂದು ಬೆಂಗಳೂರಿನಲ್ಲಿ ತಿರುವಳ್ಳುವರ್ ಮತ್ತು ಚೆನ್ನೈಯಲ್ಲಿ ಸರ್ವಜ್ಞ ಪ್ರತಿಮೆಯನ್ನು ಆಗಸ್ಟ್ 13ರಂದು ಅನಾವರಣಗೊಳಿಸುವ ಕಾರ್ಯಕ್ರಮ ನಿಗದಿಯಾಗಿತ್ತು.

ಆದರೆ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ ನಾಲ್ಕು ಪ್ರಮುಖ ಷರತ್ತುಗಳನ್ನು ವಿಧಿಸಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಸ್ಟ್ 3ರಂದು ಸರ್ವಪಕ್ಷಗಳ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ನಡೆಸಿ ಚರ್ಚಿಸಲು ಉದ್ದೇಶಿಸಿದ್ದಾರೆ.

ಆದರೆ, ಉಪಚುನಾವಣೆ ಎದುರಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಯುವ ಸಾಧ್ಯತೆಯೂ ಕಡಿಮೆಯಾಗಿದೆ. ಜತೆಗೆ ಕಾರ್ಯಕ್ರಮವನ್ನು ಉಪಚುನಾವಣೆ ನಂತರ ಉದ್ಘಾಟಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ