ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪೈರಸಿ;ವಿಶೇಷ ಕೋರ್ಟ್ ಸ್ಥಾಪನೆ ಇಲ್ಲ-ಆಚಾರ್ಯ (Kannada cinema | Piracy | Yeddyurappa | Karnataka)
 
ಆಡಿಯೋ, ವಿಡಿಯೋ ಪೈರಸಿ ಮಾಡುವವರ ಮೇಲೆ ಗೂಂಡಾ ಕಾಯ್ದೆ ಜಾರಿ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ಇದರ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ನಗರದಲ್ಲಿ ಸುದ್ದಿಗಾರಿಗೆ ವಿಷಯ ತಿಳಿಸಿದ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರು, ಗೂಂಡಾ ಕಾಯ್ದೆಯಲ್ಲೇ ಆರೋಪಿಗಳನ್ನು ಜೈಲಿಗೆ ಕಳುಹಿಸುವ ಅವಕಾಶವಿರುವುದರಿಂದ ವಿಚಾರಣೆಗೆಂದು ವಿಶೇಷ ನ್ಯಾಯಾಲಯ ಸ್ಥಾಪನೆ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಇಲ್ಲಿಯವರೆಗೆ ಗೂಂಡಾ ಕಾಯ್ದೆಯನ್ನು ಕಳ್ಳಭಟ್ಟಿ ವ್ಯಾಪಾರಿಗಳು, ಮಾದಕ ವಸ್ತು ಅಪರಾಧಿಗಳ ಮೇಲೆ ಪ್ರಯೋಗಿಸಲಾಗಿತ್ತು. ಈಗ ಪೈರಸಿ ಮಾಡುವವರ ಮೇಲೂ ಬಳಸಲು ಸಾಧ್ಯವಾಗುವಂತೆ ತಿದ್ದುಪಡಿ ತರಲಾಗಿದೆ ಎಂದು ಅವರು ಹೇಳಿದರು.

ಭಯೋತ್ಪಾದನೆ, ಅಪರಾಧಗಳನ್ನು ತಡೆಗಟ್ಟಬೇಕಾದರೆ ರಾಜ್ಯಗಳ ನಡುವೆ ಸಹಕಾರ ಅಗತ್ಯ. ಅಲ್ಲದೆ, ಅಪರಾಧಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ವಿನಿಮಯ ಮಾಡಿಕೊಳ್ಳುವ ಸಲುವಾಗಿ ಎಲ್ಲರೂ ಕೂಡಿ ವೆಬ್‌ಸೈಟ್‌ವೊಂದನ್ನು ರಚಿಸುವಂತೆ ಅವರು ಸಲಹೆ ನೀಡಿದರು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ