ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತಿರುವಳ್ಳುವರ್ ಸ್ಥಾಪನೆಗೆ ನಿರ್ಧಾರ;ಕರವೇ ವಿರೋಧ (Thiruvalluvar | Sarvajna | BJP | Yeddyurappa)
 
NRB
ರಾಜ್ಯದಲ್ಲಿ ಖ್ಯಾತ ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಡ್ಡಿ ಪಡಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರ್ವಪಕ್ಷಗಳ ಬೆಂಬಲ ವ್ಯಕ್ತವಾಗಿದೆ. ಆದರೆ ಕನ್ನಡಪರ ಸಂಘಟನೆಗಳು ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಆ.9ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

ನಗರದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡುವ ಸಂಬಂಧ ಕನ್ನಡಪರ ಸಂಘಟನೆ, ಸರ್ಕಾರದ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ವಿಧಾನಸೌಧದಲ್ಲಿ ಸರ್ವಪಕ್ಷ ಮುಖಂಡರ ಸಭೆ ಕರೆದಿದ್ದರು.

ತಮಿಳುನಾಡು ಮತ್ತು ಕರ್ನಾಟಕದ ನಡುವೆ ಕಾವೇರಿ ನೀರು, ಹೊಗೇನಕಲ್ ವಿವಾದಗಳ ವಿಚಾರ ಬೇರೆ, ಆದರೆ ಸಂಸ್ಕೃತಿ, ಸಾಹಿತ್ಯದ ವಿಚಾರದಲ್ಲಿ ಭಿನ್ನಾಭಿಪ್ರಾಯ ಬೇಡ. ಆ ನಿಟ್ಟಿನಲ್ಲಿ ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ತಿಳಿಸಿದರು. ಸರ್ಕಾರ ಆ.9ರಂದು ಬೆಂಗಳೂರಿನಲ್ಲಿ ಹಾಗೂ ಆ.13ರಂದು ಚೆನ್ನೈನಲ್ಲಿ ಪ್ರತಿಮೆಗಳ ಅನಾವರಣಕ್ಕೆ ತೀರ್ಮಾನಿಸಿದ್ದು, ಅದರಂತೆ ಕಾರ್ಯಕ್ರಮ ನಡೆಯಲಿದೆ.

ಆ ನಿಟ್ಟಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸಿದ್ದ ಸಾಹಿತಿಗಳಾದ ಪಾಟೀಲ್ ಪುಟ್ಟಪ್ಪ ದೇ.ಜವರೇಗೌಡ, ಸಿದ್ದಲಿಂಗಯ್ಯ, ಚಂದ್ರಶೇಖರ ಪಾಟೀಲ್, ಚಿದಾನಂದ ಮೂರ್ತಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್‌ನ ವಿ.ಎಸ್.ಉಗ್ರಪ್ಪ, ಜೆಡಿಎಸ್‌ನ ಎಚ್.ಡಿ.ರೇವಣ್ಣ, ಎಂ.ಸಿ.ನಾಣಯ್ಯ ಬೆಂಬಲ ವ್ಯಕ್ತಪಡಿಸಿದರು.

ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತಂತೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಸಹ ಸಹಮತ ವ್ಯಕ್ತಪಡಿಸಿದರು.

NRB
ಕನ್ನಡಪರ ಸಂಘಟನೆ ವಿರೋಧ: ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತಂತೆ ಸರ್ವಪಕ್ಷ ಸಭೆಯಲ್ಲಿ ಹಿರಿಯ ಸಾಹಿತಿಗಳು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಬಿಜೆಪಿ ಪಕ್ಷಗಳು ಒಮ್ಮತ ಬೆಂಬಲ ವ್ಯಕ್ತಪಡಿಸಿದವು. ಆದರೆ ಸಭೆಯಲ್ಲಿ ಕನ್ನಡಪರ ಸಂಘಟನೆಗಳು ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದವು.

ತಮಿಳುನಾಡಿನಲ್ಲಿ ಖ್ಯಾತ ಕವಿ ಸರ್ವಜ್ಞನ ಪ್ರತಿಮೆಯನ್ನು ನಗರದ ಪ್ರಮುಖ ಭಾಗದಲ್ಲಿ ಸ್ಥಾಪಿಸಬೇಕು, ಕನ್ನಡ ಶಾಸ್ತ್ರೀಯ ಭಾಷೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ದೂರನ್ನು ವಾಪಸು ತೆಗೆದ ನಂತರವೇ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಮುಂದಾಗಬೇಕೆಂದು ಕರವೇಯ ನಾರಾಯಣಗೌಡ ಪಟ್ಟುಹಿಡಿದರು. ನಂತರ ಸಭೆಯಿಂದ ಹೊರ ನಿರ್ಗಮಿಸುವ ಮೂಲಕ ಸರ್ವಪಕ್ಷ ಸಭೆಯಲ್ಲಿ ಒಮ್ಮತ ನಿರ್ಧಾರಕ್ಕೆ ಅಡ್ಡಿ ಉಂಟಾದಂತಾಗಿದೆ.

ಸರ್ಕಾರದ ನಿರ್ಧಾರವನ್ನು ಖಂಡಿಸಿರುವ ಕನ್ನಡ ಪರ ಸಂಘಟನೆಗಳು ಆಗೋಸ್ಟ್ 9ರಂದು ಬೆಂಗಳೂರು ಬಂದ್‌ಗೆ ಕರೆ ನೀಡುವ ಮೂಲಕ ತಿರುವಳ್ಳುವರ್ ಪ್ರತಿಮೆ ವಿವಾದ ಮುಂದುವರಿದಂತಾಗಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ