ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾಗರ ವಿಗ್ರಹಕ್ಕೆ ಚಪ್ಪಲಿ ಹಾರ:ಬಜರಂಗದಳ ಪ್ರತಿಭಟನೆ (Chikkamagaluru | VHP | Bhajrangdal | naga temple | discrimantes)
 
ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಅರಳಿಕಟ್ಟೆಯಲ್ಲಿರುವ ನಾಗರ ವಿಗ್ರಹಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಕೃತ್ಯವನ್ನು ಖಂಡಿಸಿ ಬಜರಂಗದಳ, ವಿಹಿಂಪ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.

ಈ ಘಟನೆಯಿಂದಾಗಿ ಪರಿಸರದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿತ್ತು. ಅರಳಿ ಮರದ ಅಡಿಯಲ್ಲಿ ವಿವಿಧ ದೇವರ ವಿಗ್ರಹಗಳಿದ್ದು, ಅಲ್ಲಿನ ನಾಗರ ವಿಗ್ರಹಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ ಮತ್ತು ವಿಶ್ವಹಿಂದು ಪರಿಷತ್ ಕಾರ್ಯಕರ್ತರು ಸೋಮವಾರ ರಸ್ತೆ ತಡೆ ನಡೆಸಿದರು.

ವಿಗ್ರಹಕ್ಕೆ ಅಪಚಾರ ಎಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು, ಹಿಂದೂ ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಮತ್ತು ಮತಾಂತರ ತಡೆಯಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಹಿಂದೂ ಶ್ರದ್ಧಾಕೇಂದ್ರವನ್ನು ಅಪವಿತ್ರಗೊಳಿಸುವ ಸಂಚು ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಬಜರಂಗದಳ ನಗರ ಸಂಚಾಲಕ ಶಾಂತಿ ಹೇಳಿಕೆಯಲ್ಲಿ ದೂರಿದ್ದಾರೆ.

ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿದ್ದು ಅವುಗಳನ್ನು ತಕ್ಷಣವೇ ಮುಚ್ಚಬೇಕು. ನಗರದ ಕೆಲವು ವಾರ್ಡ್‌ಗಳಲ್ಲಿ ಪ್ರಾರ್ಥನೆ ನೆಪ ಹೇಳಿಕೊಂಡು ಕ್ರಿಶ್ಚಿಯನ್ ಮಿಷನರಿಗಳು ಅಮಾಯಕರಿಗೆ ಹಣದ ಆಮಿಷವೊಡ್ಡಿ ಮತಾಂತರ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಖಂಡನೆ: ನಾಗರ ಕಲ್ಲಿಗೆ ಚಪ್ಪಲಿ ಹಾರ ಹಾಕಿರುವ ಘಟನೆಯನ್ನು ಕಾಂಗ್ರೆಸ್ ಜಿಲ್ಲಾ ಘಟಕ ತೀವ್ರ ಖಂಡಿಸಿದ್ದು, ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಣ್ಣ ವಿಷಯಕ್ಕೂ ಗಲಾಟೆ, ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ತಾನು ಅಧಿಕಾರದಲ್ಲಿದ್ದಾಗ ಈ ಘಟನೆ ನಡೆದಿದ್ದರೂ ಕೂಡ ಮೌನ ವಹಿಸಿರುವುದು ಆಶ್ಚರ್ಯವನ್ನುಂಟು ಮಾಡಿದೆ ಎಂದು ದೂರಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ