ಮಾತೃ ಭಾಷಾ ವಿವಾದದ ಬಗ್ಗೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.
ಭಾಷಾ ವಿವಾದದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಈ ಮಾಸಾಂತ್ಯಕ್ಕೆ ವಿಚಾರಣೆ ನಡೆಯಲಿದ್ದು, ಈ ವಿವಾದದಲ್ಲಿ ಪ್ರತಿವಾದಿಯಾಗಿರುವ ಕೇಂದ್ರ ಸರ್ಕಾರ ತನ್ನ ನಿಲುವನ್ನು ಶೀಘ್ರವೇ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಕರ ಸುರಕ್ಷತೆಯ ದೃಷ್ಟಿಯಿಂದ ಅವರಿಗೆ ಅನುಕೂಲವಾದ ಸ್ಥಳಗಳಿಗೆ ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ರಾಮನಗರದಲ್ಲಿ ಶಿಕ್ಷಕಿಯೊಬ್ಬರ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಶೇ.60 ರಷ್ಟು ಶಿಕ್ಷಕಿಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಿದ್ದು, ಶಿಕ್ಷಕಿಯರಿಗೆ ಅನುಕೂಲವಾಗುವ ಸ್ಥಳಗಳಿಗೆ ನಿಯೋಜನೆ ಮಾಡಲಾವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.