ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹೈಕೋರ್ಟ್ ಮೆಟ್ಟಿಲೇರಿದ ತಿರುವಳ್ಳುವರ್ ಪ್ರತಿಮೆ ವಿವಾದ (Thiruvalluvar | Sarvajna | BJP | Yeddyurappa | Tamil nadu | High court)
 
NRB
ತಿರುವಳ್ಳುವರ್ ಪ್ರತಿಮೆ ಅನಾವರಣ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ನಡುವೆ ಇರುವ ವಿವಾದ ಬಗೆಹರಿದ ನಂತರವೇ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡಬೇಕೆಂದು ಕನ್ನಡ ಪರ ಸಂಘಟನೆಗಳ ಮುಖಂಡರು ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದು ವೋಟ್ ಬ್ಯಾಂಕ್ ರಾಜಕಾರಣ ಆಗಿದ್ದು, ಎರಡು ರಾಜ್ಯಗಳ ನಡುವೆ ಸಾಕಷ್ಟು ವಿವಾದಗಳಿವೆ. ಆ ನಿಟ್ಟಿನಲ್ಲಿ ವಿವಾದ ಬಗೆಹರಿಸಿದ ನಂತರವೇ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ರಾಜ್ಯದಲ್ಲಿ ಅವಕಾಶ ನೀಡಬೇಕೆಂದು ಮಾಜಿ ಶಾಸಕ ವಾಟಾಳ್ ನಾಗರಾಜ್, ಕರ್ನಾಟಕ ರಕ್ಷಣಾವೇದಿಕೆಯ ಪ್ರವೀಣ್ ಶೆಟ್ಟಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

NRB
ಏತನ್ಮಧ್ಯೆ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಿ ಸಾರ್ವಜನಿಕ ಸಮಾರಂಭ ಮಾಡಿ ಮತದಾರರನ್ನು ಸೆಳೆಯುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಯಾವುದೇ ಕಾರಣಕ್ಕೂ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡದಂತೆ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ರಾಜ್ಯ ಮುಖ್ಯಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಅಲ್ಲದೇ ಕೆ.ಪ್ರಭಾಕರ ರೆಡ್ಡಿ, ಕೆ.ಆರ್.ಕುಮಾರ್, ಪ್ರವೀಣ್ ಶೆಟ್ಟಿ ಮತ್ತಿತರರು ಆಗಸ್ಟ್ 9ರಂದು ಬೆಂಗಳೂರು ಬಂದ್‌ಗೆ ಪೂರ್ವಭಾವಿಯಾಗಿ ಆ.7ರಂದು ಕೆಂಪೇಗೌಡ ಪ್ರತಿಮೆಯಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ.

ಆ.9ರಂದು ಚಿತ್ರಮಂದಿರ ಬಂದ್, ಬಸ್ ಸಂಚಾರ ಬಂದ್ ಮಾಡಲಿದ್ದು, ಕನ್ನಡ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು ಬಂದ್ ನಡೆಸಲಿದ್ದು, ಎದುರಾಗುವ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಸಭೆ ಎಚ್ಚರಿಕೆ ನೀಡಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ