ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸ್ಥಾನ ಭದ್ರಪಡಿಸಿಕೊಳ್ಳಲು ಸಿದ್ದು ಹೋರಾಟ: ಸಿಎಂ (Congress | BJP | Yeddyurappa | Kpcc | UPA)
 
ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವುದಕ್ಕಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಹೋರಾಟ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟೀಕೆ ಮಾಡಿದ್ದಾರೆ.

ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇದೆ. ಅದಕ್ಕಾಗಿ ಸ್ಥಾನ ಭದ್ರಪಡಿಸಿಕೊಳ್ಳುವುದಕ್ಕಾಗಿ ಸಿದ್ದರಾಮಯ್ಯನವರು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ವಿದ್ಯುತ್ ಸಮಸ್ಯೆ ಕುರಿತು ನಾಳೆ ಕೊಂಡೊಯ್ಯುವ ನಿಯೋಗದಲ್ಲಿ ಸಿದ್ದರಾಮಯ್ಯನವರು ಭಾಗವಹಿಸುವುದಿಲ್ಲ ಎಂದಿದ್ದಾರೆ. ಅವರಿಗೆ ರಾಜ್ಯ ಹಾಗೂ ಜನಪರ ಕಾಳಜಿ ಇದ್ದಿದ್ದರೆ, ನಮ್ಮೊಂದಿಗೆ ಬರಬಹುದಿತ್ತು. ಅವರಿಗೆ ಉಪಚುನಾವಣೆಯೇ ಹೆಚ್ಚಾಗಿದೆ ಎಂದು ಅವರು ಕುಟುಕಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲು ಕೇಂದ್ರ ಸರ್ಕಾರವೇ ಪ್ರಮುಖ ಕಾರಣ ಎಂದು ಗಂಭೀರ ಆರೋಪ ಮಾಡಿದರು.

ರಾಜ್ಯದ ಬಗ್ಗೆ ಮಲತಾಯಿ ಧೋರಣೆಯಿಂದ ರಾಜ್ಯದಲ್ಲಿ ವಿದ್ಯುತ್ ಪರಿಸ್ಥಿತಿ ಹದಗೆಟ್ಟಿದೆ. ಕೇಂದ್ರ ಸರ್ಕಾರ 1.5 ಸಾವಿರ ಮೆಗಾವ್ಯಾಟ್ ವಿದ್ಯುತ್ ಅನ್ನು ಇನ್ನು ರಾಜ್ಯಕ್ಕೆ ನೀಡಿಲ್ಲ. ಇದರಿಂದಾಗಿ 3.5 ಸಾವಿರ ಕೋಟಿ ರೂ.ಗಳನ್ನು ವಿದ್ಯುತ್ ಖರೀದಿಗೆ ವೆಚ್ಚ ಮಾಡುವ ಸ್ಥಿತಿ ಬಂದೊದಗಿದೆ ಎಂದು ಅವರು ವಿವರಿಸಿದರು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ