ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣ ಬೇಡವೇ?ಹೈಕೋರ್ಟ್ ಪ್ರಶ್ನೆ (Thiruvalluvar | Sarvajna | BJP | Yeddyurappa | Tamil nadu | High court)
 
NRB
ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತ ಪ್ರಕರಣದ ತುರ್ತು ವಿಚಾರಣೆ ಅನಗತ್ಯ ಎಂದಿರುವ ರಾಜ್ಯ ಹೈಕೋರ್ಟ್, ಜಾತಿ, ಭಾಷೆ ಆಧಾರದಲ್ಲಿ ದೇಶವನ್ನು ವಿಭಜಿಸಬೇಡಿ. ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣ ಬೇಡವೇ?ಎಂದು ಗುರುವಾರ ಕನ್ನಡ ಹೋರಾಟಗಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ತಿರುವಳ್ಳುವರ್ ಪ್ರತಿಮೆ ಅನಾವರಣ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ನಡುವೆ ಇರುವ ವಿವಾದವನ್ನು ಬಗೆಹರಿಸಿದ ನಂತರವೇ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡಬೇಕೆಂದು ಕನ್ನಡ ಪರ ಸಂಘಟನೆಗಳು ಬುಧವಾರ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತಂತೆ ಇಂದೇ ವಿಚಾರಣೆ ನಡೆಸಬೇಕೆಂಬ ಅರ್ಜಿದಾರರ ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠದ ಮುಖ್ಯನ್ಯಾಯಮೂರ್ತಿಗಳಾದ ಪಿ.ಡಿ.ದಿನಕರನ್ ತಿರಸ್ಕರಿಸಿ, ಕನ್ನಡಪರ ಹೋರಾಟಗಾರರನ್ನು ತರಾಟೆಗೆ ತೆಗೆದುಕೊಂಡರು. ಜಾತಿ, ಭಾಷೆ ಆಧಾರದಲ್ಲಿ ದೇಶವನ್ನು ವಿಭಜಿಸಬೇಡಿ, ಚೆನ್ನೈನಲ್ಲಿ ನಿಮಗೆ ಸರ್ವಜ್ಞ ಪ್ರತಿಮೆಯ ಅನಾವರಣ ಬೇಡವೇ ಎಂದು ಪ್ರಶ್ನಿಸಿದ ನ್ಯಾಯಾಧೀಶರು, ಈ ಕುರಿತಂತೆ ತುರ್ತು ವಿಚಾರಣೆ ಅನಗತ್ಯ ಎಂದರು.

ಇದು ವೋಟ್ ಬ್ಯಾಂಕ್ ರಾಜಕಾರಣ ಆಗಿದ್ದು, ಎರಡು ರಾಜ್ಯಗಳ ನಡುವೆ ಸಾಕಷ್ಟು ವಿವಾದಗಳಿವೆ. ಆ ನಿಟ್ಟಿನಲ್ಲಿ ವಿವಾದ ಬಗೆಹರಿಸಿದ ನಂತರವೇ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ರಾಜ್ಯದಲ್ಲಿ ಅವಕಾಶ ನೀಡಬೇಕೆಂದು ಮಾಜಿ ಶಾಸಕ ವಾಟಾಳ್ ನಾಗರಾಜ್, ಕರ್ನಾಟಕ ರಕ್ಷಣಾವೇದಿಕೆಯ ಪ್ರವೀಣ್ ಶೆಟ್ಟಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಏತನ್ಮಧ್ಯೆ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಿ ಸಾರ್ವಜನಿಕ ಸಮಾರಂಭ ಮಾಡಿ ಮತದಾರರನ್ನು ಸೆಳೆಯುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಯಾವುದೇ ಕಾರಣಕ್ಕೂ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡದಂತೆ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ರಾಜ್ಯ ಮುಖ್ಯಚುನಾವಣಾಧಿಕಾರಿಗಳಿಗೂ ಮನವಿ ಸಲ್ಲಿಸಿತ್ತು.

ಅಲ್ಲದೇ ಕೆ.ಪ್ರಭಾಕರ ರೆಡ್ಡಿ, ಕೆ.ಆರ್.ಕುಮಾರ್, ಪ್ರವೀಣ್ ಶೆಟ್ಟಿ ಮತ್ತಿತರರು ಆಗಸ್ಟ್ 9ರಂದು ಬೆಂಗಳೂರು ಬಂದ್‌ಗೆ ಪೂರ್ವಭಾವಿಯಾಗಿ ಆ.7ರಂದು ಕೆಂಪೇಗೌಡ ಪ್ರತಿಮೆಯಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿ, ಆ.9ರಂದು ಚಿತ್ರಮಂದಿರ ಬಂದ್, ಬಸ್ ಸಂಚಾರ ಬಂದ್ ಮಾಡಲಿದ್ದು, ಕನ್ನಡ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು ಬಂದ್ ನಡೆಸಲಿದ್ದು, ಎದುರಾಗುವ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಸಭೆ ಎಚ್ಚರಿಕೆ ನೀಡಿತ್ತು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ