ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಂದ್ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ;ಹೈಕೋರ್ಟ್ (Thiruvalluvar | Sarvajna | BJP | Yeddyurappa | Tamil nadu | High court)
 
NRB
ತಿರುವಳ್ಳುವರ್ ಪ್ರತಿಮೆ ಅನಾವರಣ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್‌ನಲ್ಲಿ ಕನ್ನಡ ಪರ ಸಂಘಟನೆಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ವಜಾಗೊಳಿಸಿ, ಬೆಂಗಳೂರು ಬಂದ್‌ಗೆ ಆಕ್ಷೇಪ ವ್ಯಕ್ತಪಡಿಸುವ ಮೂಲಕ ಕನ್ನಡಪರ ಸಂಘಟನೆಗಳು ಮುಖಭಂಗ ಅನುಭವಿಸುವಂತಾಗಿದೆ.

ತಿರುವಳ್ಳುವರ್ ಪ್ರತಿಮೆ ಅನಾವರಣ ವಿವಾದದ ಕುರಿತು ಕನ್ನಡಪರ ಸಂಘಟನೆಗಳು ಸಲ್ಲಿಸಿದ್ದ ಪಿಐಎಲ್ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆ.9ರಂದು ಬಂದ್ ಮಾಡಿದ್ರೆ ಕನ್ನಡಪರ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತ ಪ್ರಕರಣದ ತುರ್ತು ವಿಚಾರಣೆ ಅನಗತ್ಯ ಎಂದಿರುವ ರಾಜ್ಯ ಹೈಕೋರ್ಟ್, ಜಾತಿ, ಭಾಷೆ ಆಧಾರದಲ್ಲಿ ದೇಶವನ್ನು ವಿಭಜಿಸಬೇಡಿ. ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣ ಬೇಡವೇ?ಎಂದು ಗುರುವಾರ ಪಿಐಎಲ್‌ನ ತುರ್ತು ವಿಚಾರಣೆ ನಡೆಸಿ, ಕನ್ನಡ ಹೋರಾಟಗಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ತಿರುವಳ್ಳುವರ್ ಪ್ರತಿಮೆ ಅನಾವರಣ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ನಡುವೆ ಇರುವ ವಿವಾದವನ್ನು ಬಗೆಹರಿಸಿದ ನಂತರವೇ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡಬೇಕೆಂದು ಕನ್ನಡ ಪರ ಸಂಘಟನೆಗಳು ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದವು.

ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತಂತೆ ಇಂದೇ ವಿಚಾರಣೆ ನಡೆಸಬೇಕೆಂಬ ಅರ್ಜಿದಾರರ ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠದ ಮುಖ್ಯ ನ್ಯಾಯಮೂರ್ತಿಗಳಾದ ಪಿ.ಡಿ.ದಿನಕರನ್ ತಿರಸ್ಕರಿಸಿ, ಕನ್ನಡಪರ ಹೋರಾಟಗಾರರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜಾತಿ, ಭಾಷೆ ಆಧಾರದಲ್ಲಿ ದೇಶವನ್ನು ವಿಭಜಿಸಬೇಡಿ, ಚೆನ್ನೈನಲ್ಲಿ ನಿಮಗೆ ಸರ್ವಜ್ಞ ಪ್ರತಿಮೆಯ ಅನಾವರಣ ಬೇಡವೇ ಎಂದು ಪ್ರಶ್ನಿಸಿದ ನ್ಯಾಯಾಧೀಶರು, ಈ ಕುರಿತಂತೆ ತುರ್ತು ವಿಚಾರಣೆ ಅನಗತ್ಯ ಎಂದು ತಿಳಿಸಿದ್ದರು.

ರಾಜಭವನ ಚಲೋ: ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಬಿಗಿಪಟ್ಟು ಹಿಡಿದಿರುವ ಕನ್ನಡಪರ ಸಂಘಟನೆಗಳು ಕಾರ್ಪೋರೇಶನ್ ಎದುರಿನ ಕೆಂಪೇಗೌಡ ಪ್ರತಿಮೆಯಿಂದ ರಾಜಭವನ ಚಲೋ ಹೊರಡುವುದಾಗಿ ತಿಳಿಸಿದೆ. ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡದಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ಕನ್ನಡಪರ ಸಂಘಟನೆಗಳು ತಿಳಿಸಿವೆ.

ಅಲ್ಲದೇ ಪ್ರತಿಮೆ ವಿವಾದ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಸಂಜೆ ಕರೆದಿರುವ ಸಭೆಗೂ ಗೈರು ಹಾಜರಾಗುವುದಾಗಿ ಹೇಳಿವೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ