ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಆರೋಪ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಮ್ಮೆ ಕೇಂದ್ರ ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ವೆಂಕಯ್ಯ ನಾಯ್ಡು ಶನಿವಾರ ಸವಾಲು ಹಾಕಿದ್ದಾರೆ.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನಮ್ಮ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಹೀಗಿರುವಾಗ ವಿನಾಕಾರಣ ಸಿದ್ದರಾಮಯ್ಯ ಟೀಕಿಸುವುದು ಸರಿಯಲ್ಲ ಎಂದರು.
ಕೇಂದ್ರದ ಯುಪಿಎ ಸರ್ಕಾರ 6.8ರಷ್ಟು ಆರ್ಥಿಕ ಕೊರತೆ ಅನುಭವಿಸುತ್ತಿದ್ದು, ಕರ್ನಾಟಕ ರಾಜ್ಯ ಸರ್‌ಪ್ಲಸ್ ಆದಾಯ ಹೊಂದಿದೆ ಆದರೂ ಸಿದ್ದರಾಮಯ್ಯ ಅವರ ಟೀಕೆ ದುರುದ್ದೇಶಪೂರ್ವಕವಾಗಿದೆ ಎಂದು ಹೇಳಿದರು.
ಕೇಂದ್ರದ ಶೇ.60ರಷ್ಟು ಅಯವ್ಯಯ ವೆಚ್ಚವನ್ನು ಸಾಲದ ಮೂಲಕ ಭರಿಸುತ್ತಿದೆ, ಸುಭದ್ರವಾಗಿದೆ ರಾಜ್ಯ ಸರ್ಕಾರದ ಬೊಕ್ಕಸದ ಬಗ್ಗೆ ಸಿದ್ದರಾಮಯ್ಯ ಆಧಾರರಹಿತವಾಗಿ ಮಾತನಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಕೇಂದ್ರ ಸರ್ಕಾರದ ಬಗ್ಗೆ ರಾಜ್ಯದ ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಹಾಗೂ ಅರುಣಾಚಲ ಪ್ರದೇಶಗಳ ಮುಂಬರುವ ಚುನಾವಣೆಗಳಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಂದರು.