ತಿರುವಳ್ಳುವರ್ ಪ್ರತಿಮೆ ಅನಾವರಣ ನಡೆಸದಂತೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಶನಿವಾರ ಕರವೇಯ ಕಾರ್ಯಕರ್ತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತ ಮಂಜುನಾಥ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಖ್ಯಾತ ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣ ಭಾನುವಾರ ನಡೆಯಲಿದ್ದು, ಸರ್ಕಾರ ಕೂಡ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ ಎಂದು ಹೇಳಿದ್ದು, ಕನ್ನಡಪರ ಸಂಘಟನೆಗಳು ಮಾತ್ರ ಪ್ರತಿಮೆ ಅನಾವರಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿವೆ.
ಅಲ್ಲದೇ ಆಗಸ್ಟ್ 9ರಂದು ಬೆಂಗಳೂರು ಬಂದ್‌ಗೆ ಕರೆ ಕೊಟ್ಟಿದ್ದು ಯಾರಿಂದಲೂ ಬಂದ್ ತಡೆಯಲು ಸಾಧ್ಯವಿಲ್ಲ ಎಂದು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಸರ್ಕಾರ ಕೂಡ ಬಿಗಿ ನಿಲುವು ತಳೆದಿದೆ. ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದಿದ್ದು, ಬಂದ್ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.