ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಂಧಿತ ವಾಟಾಳ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು (Vatal Nagaraj | Thiruvalluvar | Arrest | Hassan)
 
ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿ ಬಂದ್‌ಗೆ ಕರೆನೀಡಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಂಧನಕ್ಕೀಡಾಗಿದ್ದ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಅಸ್ವಸ್ಥರಾಗಿ ಹಾಸನದ ಚಾಮರಾಜೇಂದ್ರ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿಮೆ ಅನಾವರಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದಿದ್ದ ವಾಟಾಳ್ ಅವರನ್ನು ಚನ್ನರಾಯಪಟ್ಟಣದಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಶನಿವಾರ ಬಂಧನಕ್ಕೊಳಪಡಿಸಿದ್ದರು.

ರಕ್ತದೊತ್ತಡ ಮತ್ತು ಮಧುಮೇಹಗಳಿಂದ ಬಳಲುತ್ತಿರುವ 60 ವರ್ಷ ವಯಸ್ಸಿನ ವಾಟಾಳ್ ನಾಗರಾಜ್ ಅವರು ಅಸ್ವಸ್ಥರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಯಿತು. ಇದಲ್ಲದೆ, ಅವರೊಂದಿಗೆ ಚನ್ನರಾಯಪಟ್ಟಣದಲ್ಲಿ ಬಂಧನಕ್ಕೊಳಗಾಗಿದ್ದ ಇತರ ನಾಲ್ವರು ಚಳವಳಿಗಾರರನ್ನೂ ಸಹ ಅನಾರೋಗ್ಯದ ಹಿನ್ನೆಲೆಯಲ್ಲಿ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಮುಂಜಾಗ್ರತಾ ಕ್ರಮವಾಗಿ ವಾಟಾಳ್, ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸೇರಿದಂತೆ 400ಕ್ಕೂ ಹೆಚ್ಚಿನ ಹೋರಾಟಗಾರರನ್ನು ಶನಿವಾರವೇ ಬಂಧಿಸಿದ್ದರಿಂದ ಬಂದ್ ಕರೆ ಯಶಸ್ವಿಯಾಗಿಲ್ಲ. ಈ ಮಧ್ಯೆ, ಪ್ರತಿಭಟನೆಗೆಗಾಗಿ ಮಲ್ಲೇಶ್ವರಂ ಮೈದಾನದಲ್ಲಿ ಅವಿತು ಕುಳಿತಿದ್ದ ಸುಮಾರ್ 50 ಮಂದಿ ಕಾರ್ಯಕರ್ತರನ್ನು ಭಾನುವಾರ ಮುಂಜಾನೆ ಬಂಧಿಸಲಾಯಿತು. ಬಂದ್ ಕರೆ ಯಶಸ್ವಿಯಾಗದೆ, ಜನಜೀವನ ಎಂದಿನಂತೆ ನಡೆಯುತ್ತಿದೆ ಹಾಗೂ ಸಾರಿಗೆ ಸಂಚಾರಕ್ಕೂ ಅಡ್ಡಿಯಾಗಿಲ್ಲ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ