ರಾಜ್ಯದ ವಿದ್ಯುತ್ ಸ್ಥಿತಿಗತಿ ಬಗ್ಗೆ ಅರಿವಿಲ್ಲದಂತೆ ಮಾತನಾಡುತ್ತಿರುವ ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಮೂರ್ಖ, ಶತಮೂರ್ಖ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.
ಅವರು ಭಾನುವಾರ ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಅಭಾವ ಹೇಗೆ ಕೊನೆಗಾಣಿಸಬೇಕು ಎಂಬುದರ ಬಗ್ಗೆ ಸ್ವಲ್ಪವೂ ಗೊತ್ತಿಲ್ಲದ ಸಚಿವ ಈಶ್ವರಪ್ಪ ತನ್ನ ತಪ್ಪು ಮುಚ್ಚಿಕೊಳ್ಳಲು ಕಾಂಗ್ರೆಸ್‌ನ್ನು ದೂರುತ್ತಾರೆ ಎಂದರು. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ತುಂಬುತ್ತಿವೆ. ಆದರೂ ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗಿದೆ. ವಿದ್ಯುತ್ ಖಾತೆಯನ್ನು ಸರಿಯಾಗಿ ನಿರ್ವಹಣೆ ಮಾಡಲಾಗದ ಇಂಧನ ಸಚಿವ ಈಶ್ವರಪ್ಪ ಇದಕ್ಕೆ ನೇರ ಹೊಣೆ ಎಂದು ಆಪಾದಿಸಿದರು.
ರಾಜ್ಯದಲ್ಲಿ ಆಡಳಿತ ನಡೆಸಿದ ಇಲ್ಲಿಯವರೆಗೆ ಸರ್ಕಾರಗಳಲ್ಲಿ ಅತಿ ಭ್ರಷ್ಟ ಹಾಗೂ ರೈತ ವಿರೋಧಿ ಸರ್ಕಾರ ಅಂದರೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎಂದು ಟೀಕಿಸಿದರು.