ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ಸರ್ವಾಧಿಕಾರಿ; ನಾರಾಯಣ ಗೌಡ ಕಿಡಿ (Yeddyurappa | Narayana gowda | BJP | Bangalore)
 
NRB
ಕನ್ನಡಪರ ಸಂಘಟನೆಗಳ ನಾಯಕರನ್ನು ಜೈಲಿನಲ್ಲಿರಿಸಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸರ್ವಾಧಿಕಾರ ಧೋರಣೆಯನ್ನು ಪ್ರದರ್ಶಿಸಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಆರೋಪಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರನ್ನು ಕರೆಸಿ ನಗರದಲ್ಲಿ ತಮಿಳು ಭಾಷಿಕರ ಸಮಾವೇಶ ನಡೆಸಲಾಗಿದೆ. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕಾರ್ಯಕ್ರಮದ ಆಹ್ವಾನವನ್ನು ತಮಿಳಿನಲ್ಲಿ ಮುದ್ರಿಸಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಳೆದ ಕೆಲವು ವರ್ಷಗಳಲ್ಲಿ ಹಲವು ವಿಚಾರಗಳಲ್ಲಿ ತಕರಾರು ಎದ್ದಿವೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ, ವರನಟ ಡಾ. ರಾಜ್ ಕುಮಾರ್ ಅಪಹರಣ ಪ್ರಕರಣ, ಕಾವೇರಿ ನೀರಿನ ವಿವಾದ ಸೇರಿದಂತೆ ಹಲವು ಪ್ರಕರಣಗಳಲ್ಲಿ ತಮಿಳುನಾಡು ತಕರಾರು ತೋರಿಸಿದೆ ಎಂದು ಅವರು ಆರೋಪಿಸಿದರು.

ಈ ಎಲ್ಲಾ ವಿಚಾರಗಳು ಬಗೆಹರಿದ ನಂತರ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿದ್ದೇವೆ. ಆದರೆ ಸರ್ಕಾರ ಹಠದಿಂದ ಪ್ರತಿಮೆ ಅನಾವರಣ ಮಾಡುವ ಮೂಲಕ ಕನ್ನಡಿಗರ ಭಾವನೆಯನ್ನು ಕೆರಳಿಸಿದೆ ಎಂದು ತಿಳಿಸಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ