ಚಾಮರಾಜಪೇಟೆಯಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು 70 ಮಂದಿ ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆ ಉಪಾಹಾರ ಸೇವನೆ ಮಾಡಿದ ನಂತರ ಅಸ್ವಸ್ಥರಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಧ್ಯಮಿಕ ಹಾಗೂ ಪ್ರೌಢಶಾಲೆಯಲ್ಲಿ ಅಭ್ಯಾಸ ಮಾಡುವ ಸುಮಾರು 200 ವಿದ್ಯಾರ್ಥಿಗಳು ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದು, ಅವರಲ್ಲಿ ಸುಮಾರು 70 ವಿದ್ಯಾರ್ಥಿಗಳು ಬೆಳಿಗ್ಗೆ ಶಾಲೆಯ ಊಟದ ಮನೆಯಲ್ಲಿ ಇಡ್ಲಿ ಚಟ್ನಿ ಸೇವಿಸಿದ ನಂತರ ಅಸ್ವಸ್ಥರಾಗಿ ವಾಂತಿ ಮಾಡಿಕೊಂಡಾಗ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ವಾಣಿವಿಲಾಸ್, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅವರೆಲ್ಲ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.