ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತದಡಿ ವಿದ್ಯುತ್ ಸ್ಥಾವರಕ್ಕೆ ಸರ್ಕಾರದ ಅಸ್ತು (BJP | Yeddyurappa | Shivmoga | K.S. Ishwarappa | tadadi | thermal plant)
 
NRB
ರಾಜ್ಯದಲ್ಲಿ ವಿದ್ಯುತ್ ಅಭಾವವನ್ನು ನೀಗಿಸುವ ನಿಟ್ಟಿನಲ್ಲಿ 700ಮೆಗಾ ವ್ಯಾಟ್ ಸಾಮರ್ಥ್ಯದ ಮೂರು ಅನಿಲ ಉತ್ಪಾದನೆ ಕೇಂದ್ರಗಳನ್ನು ಉದ್ದೇಶಿತ ಉತ್ತರ ಕನ್ನಡ ಜಿಲ್ಲೆಯ ತದಡಿ ವಿದ್ಯುತ್ ಸ್ಥಾವರದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಸ್ಥಳದಲ್ಲಿ 4ಸಾವಿರ ಮೆಗಾ ವ್ಯಾಟ್ ಅಲ್ಟ್ರಾ ಪವರ್ ವಿದ್ಯುತ್ ಕೇಂದ್ರ ಸ್ಥಾಪಿಸಲಾಗುವುದು ಎಂದರು. ಉಷ್ಣ ಸ್ಥಾವರ ಸ್ಥಾಪನೆಯಿಂದ ಪರಿಸರ ನಾಶವಾಗಲಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪರಿಸರವಾದಿಗಳು, ರೈತರು, ಧಾರ್ಮಿಕ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆ ನೆಲೆಯಲ್ಲಿ ಅನಿಲ ಸಂಬಂಧಿತ ಸ್ಥಾವರ ಸ್ಥಾಪಿಸಲು ಮುಂದಾಗಿರುವುದಾಗಿ ತಿಳಿಸಿದರು.

ಮುಂದಿನ ವರ್ಷ ಸ್ಥಾವರಕ್ಕೆ ಚಾಲನೆ ನೀಡಲಾಗುವುದು. ಇದರ ವೆಚ್ಚಕ್ಕೆ ಮೊದಲೇ ಹಂತದಲ್ಲಿ 400ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುವುದು. ವಿದ್ಯುತ್ ಸ್ಥಾವರಕ್ಕೆ ಬೇಕಿರುವ ಅಗತ್ಯ ಕ್ರಮಗಳನ್ನು ಈಗಾಗಲೇ ಕೆಪಿಟಿಸಿಎಲ್ ಆರಂಭಿಸಿದೆ. ಇದರ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದರು.

ಯೋಜನೆಗಾಗಿ ಸುಮಾರು 1800 ಎಕರೆ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ. 300ಎಕರೆ ಪ್ರದೇಶದಲ್ಲಿ ಸ್ಥಾವರ ನಿರ್ಮಾಣ ಮಾಡಲಾಗುವುದು. ನಂತರ ಎರಡನೇ ಹಂತದಲ್ಲಿ700 ಮೆಗಾ ವ್ಯಾಟ್ ಅನಿಲ ಉತ್ಪಾದನೆಯ ಮೂರು ಸ್ಥಾವರಗಳ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ